Published
10 hours agoon
By
Akkare Newsಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಒಕ್ಕೂಟ ನೇತೃತ್ವದಲ್ಲಿ ಅವೈಜ್ಞಾನಿಕ ಮೀನುಗಾರಿಕೆಯಾದ ಬೆಳಕು ಮತ್ತು ಬುಲ್ ಟ್ರಾಲ್ ಮೀನುಗಾರಿಕೆ ನಿಷೇಧದ ಅನುಷ್ಠಾನಕ್ಕಾಗಿ ಹಾಗೂ ಸೀಮೆಎಣ್ಣೆ ದರ ಕಡಿಮೆ ಮಾಡುವುದರ ಬಗ್ಗೆ ಜ.10ರಂದು ತ್ರಾಸಿ ಬೀಚ್ ನಲ್ಲಿ ನಡೆಯುವ ಪ್ರತಿಭಟನೆಗೆ ಮೂರು ಜಿಲ್ಲೆಗಳ ನಾಡದೋಣಿ ಮೀನು ಗಾರಿಕೆಗೆ ರಜೆ ಘೋಷಣೆ ಮಾಡಲಾಗಿದೆ.
ಮೂರು ಜಿಲ್ಲೆಗಳ ಮೀನುಗಾರರು ಪ್ರತಿಭಟನೆಯಲ್ಲಿ ಪಾಲ್ಗೊಳ್ಳಲಿದ್ದಾ ರೆಂದು ಕರ್ನಾಟಕ ರಾಜ್ಯ ಸಾಂಪ್ರದಾಯಿಕ ನಾಡದೋಣಿ ಮೀನುಗಾರರ ಅಧ್ಯಕ್ಷ ಅಳ್ವಿಕೋಡಿ ನಾಗೇಶ್ ಖಾರ್ವಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.