Published
8 hours agoon
By
Akkare Newsರಾಜ್ಯದಲ್ಲಿ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗೆ, ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸುವುದು ಬಾಕಿ ಇದೆ. ಈ ಚುನಾವಣೆಗೆ ಈಗ ಮುಹೂರ್ತ ಫಿಕ್ಸ್ ಆದಂತೆ ಆಗಿದೆ. ಜಿಲ್ಲಾ, ತಾಲೂಕು ಪಂಚಾಯತಿಗೆ ಏಪ್ರಿಲ್, ಮೇ ಒಳಗೆ ಚುನಾವಣೆ ನಡೆಯೋದು ಖಚಿತವಾಗಿದೆ. ಈ ಕುರಿತಂತೆ ಸುದ್ದಿಗಾರರೊಂದಿಗೆ ಮಾಹಿತಿ ಹಂಚಿಕೊಂಡಿರುವಂತ ರಾಜ್ಯ ಚುನಾವಣಾ ಆಯುಕ್ತ ಸಂಗ್ರೇಶಿರವರು ಚುನಾವಣಾ ಆಯೋಗದಿಂದ ಜಿಲ್ಲಾ, ತಾಲೂಕು ಪಂಚಾಯತಿಗೆ ಚುನಾವಣೆಗೆ ತಯಾರಿ, ಸಿದ್ಧತೆ ಮಾಡಿಕೊಳ್ಳಲಾಗಿದೆ. ಏಪ್ರಿಲ್ ಒಳಗೆ ಜಿಲ್ಲಾ, ತಾಲೂಕು ಪಂಚಾಯತಿಗೆ ಚುನಾವಣೆ ನಡೆಸಲು ನಿರ್ಧರಿಸಲಾಗಿದೆ ಎಂದರು.
ಜಿಲ್ಲಾಧಿಕಾರಿಗಳ ಕಚೇರಿಗೆ ಭೇಟಿ ನೀಡಿ, ಚುನಾವಣಾ ಪ್ರಕ್ರಿಯೆ ಸಂಬಂಧ ಮತದಾರರ ಪಟ್ಟಿಯ ಬಗ್ಗೆ ಮಾಹಿತಿ ಪಡೆಯಲಾಗುತ್ತಿದೆ. ಅಂತಿಮ ಮತದಾರರ ಪಟ್ಟಿ, ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗೆ ಚುನಾವಣೆಯ ಮೀಸಲಾತಿ ಪಟ್ಟಿ ಕೈಸೇರಿದ ಬಳಿಕ ಚುನಾವಣೆಗೆ ವೇಳಾಪಟ್ಟಿ ಪ್ರಕಟಿಸಲಾಗುವುದು ಎಂದರು.
ಏಪ್ರಿಲ್ ಒಳಗೆ ಜಿಲ್ಲಾ ಹಾಗೂ ತಾಲೂಕು ಪಂಚಾಯತಿಗೆ ಚುನಾವಣೆ ನಡೆಯುತ್ತದೆ. ಏಪ್ರಿಲ್, ಮೇ ಒಳಗೆ ರಾಜ್ಯದ ಸ್ಥಳೀಯ ಸಂಸ್ಥೆಗಳಿಗೆ ಚುನಾವಣೆ ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದ್ದಾರೆ.