Published
1 year agoon
By
Akkare News

ಭಾಗ್ಯಶ್ರೀ ಎಂಬ ಮಹಿಳೆಗೆ ಫೆಬ್ರವರಿ 5ರಂದು ಸಿಸೇರಿಯನ್ ಮಾಡಿಸಲಾಗಿತ್ತು. ಶಸ್ತ್ರ ಚಿಕಿತ್ಸೆ ವೇಳೆ ವೈದ್ಯರು ಹೊಟ್ಟೆಯಲ್ಲೇ ಬಟ್ಟೆಯ ಉಂಡೆ ಮತ್ತು ಹತ್ತಿ ಬಿಟ್ಟು ಹೊಲಿಗೆ ಹಾಕಿದ್ದಾರೆ. ಇದರ ಪರಿಣಾಮ ಶಸ್ತ್ರ ಚಿಕಿತ್ಸೆ ನಡೆದು ಒಂದು ವಾರದ ಬಳಿಕ ಮಹಿಳೆಗೆ ತೀವ್ರವಾಗಿ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆಸ್ಪತ್ರೆಯಲ್ಲಿ ಸ್ಕ್ಯಾನಿಂಗ್ ಮಾಡಿದ ವೇಳೆ ವೈದ್ಯರ ಯಡವಟ್ಟು ಬೆಳಕಿಗೆ ಬಂದಿದೆ.
ಬಳಿಕ ಅಫಜಲಪುರ ಕರಜಗಿ ಗ್ರಾಮದ ಪ್ರಾಥಮಿಕ ಕೇಂದ್ರಕ್ಕೆ ತೆರಳಿ ವೈದ್ಯರಿಂದ ಮರು ಶಸ್ತ್ರ ಚಿಕಿತ್ಸೆ ಮಾಡಿಸಿ, ಹೊಟ್ಟೆಯಲ್ಲಿದ್ದ ಬಟ್ಟೆ ಉಂಡೆ ಹಾಗೂ ಹತ್ತಿ ಹೊರ ತೆಗೆಯಲಾಗಿದೆ.
ಇನ್ನೂ ಮಹಿಳೆಯ ಕುಟುಂಬಸ್ಥರ ಆರೋಪವನ್ನು ಜಿಮ್ಸ್ ವೈದ್ಯರು ತಳ್ಳಿ ಹಾಕಿದ್ದಾರೆ. ಹೆರಿಗೆ ನಂತರ ರಕ್ತಸ್ರಾವ ತಡೆಯಲು ಪ್ಯಾಡ್ ಇಡಾಗಿದೆ. 3 ದಿನಗಳ ನಂತರ ಬಂದು ತೆಗೆಸುವಂತೆ ಹೇಳಲಾಗಿತ್ತು. ಆದರೆ ಅವರು ಬಂದಿರಲಿಲ್ಲ. ಮಹಿಳೆಗೆ ಯಾವುದೇ ತೊಂದರೆ ಇಲ್ಲ ಎಂದಿದ್ದಾರೆ.


ಬಾಣಂತಿ ಹಾಗೂ ವೈದ್ಯರ ನಡುವಿನ ಕಮ್ಯುನಿಕೇಶನ್ ಗ್ಯಾಪ್ ನಿಂದ ಹೀಗಾಗಿದೆ. ಇದರಲ್ಲಿ ಯಾರದ್ದೂ ತಪ್ಪಿಲ್ಲ ಎಂದು ಕಲಬುರಗಿ ಡಿಹೆಚ್ ಒ ಡಾ.ಶರಣಬಸಪ್ಪ ಕ್ಯಾತನಾಳ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.

