Published
1 month agoon
By
Akkare Newsಬೆಂಗಳೂರಿನ ವಿವಿಧೆಡೆಯಿಂದ ಸಂಗ್ರಹಿಸಲಾದ ಇಡ್ಲಿ ಮಾದರಿಗಳಲ್ಲಿ ಸುಮಾರು 51 ರಷ್ಟು ಅಸುರಕ್ಷಿತ ಎಂಬುದು ಆಹಾರ ಇಲಾಖೆಯ ಪ್ರಯೋಗಾಲಯದಲ್ಲಿ ದೃಢಪಟ್ಟ ಬೆನ್ನಲ್ಲೇ ಕರ್ನಾಟಕ ಸರ್ಕಾರ ಮಹತ್ವದ ಕ್ರಮಕ್ಕೆ ಮುಂದಾಗಿದೆ. ರಾಜ್ಯದ ಹೋಟೆಲ್, ಉಪಾಹಾರ ಕೇಂದ್ರಗಳಲ್ಲಿ ಪ್ಲಾಸ್ಟಿಕ್ ಬಳಕೆ ನಿಷೇಧಿಸಲಾಗುತ್ತಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಘೋಷಿಸಿದ್ದಾರೆ.
ಸುಮಾರು 251 ತಿಂಡಿ ಹೋಟೆಲ್, ಅಂಗಡಿಗಳಿಂದ ಸ್ಯಾಂಪಲ್ಸ್ ಪಡೆಯಲಾಗಿತ್ತು. ಅವುಗಳ ಪೈಕಿ 51 ಕಡೆ ಸಂಗ್ರಹಿಸಿದ್ದ ಸ್ಯಾಂಪಲ್ಸ್ ಅಸುರಕ್ಷಿತ ಎಂಬುದು ಪ್ರಯೋಗಾಲಯ ಪರೀಕ್ಷೆಯಲ್ಲಿ ದೃಢಪಟ್ಟಿದೆ. ಪ್ಲಾಸ್ಟಿಕ್ ಬಳಕೆಯಿಂದ ಇಡ್ಲಿಯಲ್ಲಿ ಕಾರ್ಸಿನೋಜೆನಿಕ್ ಅಂಶ ಸೇರಿದೆ ಕಾರ್ಸಿನೋಜೆನಿಕ್ ಅಂಶ ಕ್ಯಾನ್ಸರ್ಗೆ ಕಾರಣವಾಗುತ್ತದೆ ಎಂದು ಹೇಳಿದ್ದಾರೆ.
ಇಡ್ಲಿ ತಯಾರಿಸಲು ಬಟ್ಟೆಯ ಬದಲು ಪ್ಲಾಸ್ಟಿಕ್ ಕವರ್ ಬಳಕೆ ಮಾಡಲಾಗುತ್ತಿದೆ. ಇದು ಕ್ಯಾನ್ಸರ್ ಕಾರಕವಾಗಿದೆ ಎಂದು ತಜ್ಞರು ಎಚ್ಚರಿಕೆ ನೀಡಿದ್ದರು. ಇದರ ಬೆನ್ನಲ್ಲೇ ಎಚ್ಚೆತ್ತುಕೊಂಡಿದ್ದ ಆರೋಗ್ಯ ಇಲಾಖೆ ಅನೇಕ ಕಡೆಗಳಿಂದ ಮಾದರಿಗಳನ್ನು ಸಂಗ್ರಹಿಸಿ ಪರೀಕ್ಷೆಗೆ ಒಳಪಡಿಸಿತ್ತು. ಆ ಪೈಕಿ ಸುಮಾರು 50 ರಷ್ಟು ಸ್ಯಾಂಪಲ್ಸ್ ವರದಿ ಬಂದಿದ್ದು, ಕಾರ್ಸಿನೋಜೆನಿಕ್ ಅಂಶ ಪತ್ತೆಯಾಗಿದೆ. ಉಳಿದ ಸ್ಯಾಂಪಲ್ಸ್ ವರದಿಗಾಗಿ ಕಾಯಲಾಗುತ್ತಿದೆ.