Published
1 month agoon
By
Akkare Newsಪುತ್ತೂರು: ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಎಸ್ಸಿಆರ್ ಇದರ ರಾಷ್ಟ್ರೀಯ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಸಹಕಾರ ರತ್ನ ಡಾ. ಎಂ.ಎನ್. ರಾಜೇಂದ್ರ ಕುಮಾರ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾ ಸಹಕಾರಿ ಯೂನಿಯನ್ ನೂತನ ಅಧ್ಯಕ್ಷರಾಗಿ ಆಯ್ಕೆಗೊಂಡಿರುವ ಶಶಿಕುಮಾರ್ ರೈ ಬಾಲ್ಯೊಟ್ಟು ಅವರಿಗೆ ಪುತ್ತೂರು ಉಪವಿಭಾಗದ ಸಹಕಾರಿ ಬಂಧುಗಳ ವತಿಯಿಂದ ಮಾ.1ರಂದು ಬೆಳಗ್ಗೆ 10-30 ಗಂಟೆಗೆ ಎಂ. ಸುಂದರರಾಮ್ ಶೆಟ್ಟಿ ಸ್ಮಾರಕ ಬಂಟರ ಭವನದಲ್ಲಿ ಅಭಿವಂದನಾ ಕಾರ್ಯಕ್ರಮವು ನಡೆಯಲಿದೆ.
ಕಾರ್ಯಕ್ರಮವನ್ನು ಮಾಜಿ ಸಚಿವ ಬಿ. ರಮಾನಾಥ ರೈಯವರು ಉದ್ಘಾಟಿಸಲಿದ್ದಾರೆ. ಅಭಿವಂದನಾ ಕಾರ್ಯಕ್ರಮವನ್ನು ಮಾನವ ಹಕ್ಕುಗಳ ಆಯೋಗ ಕರ್ನಾಟಕ ಸರಕಾರ ಇದರ ಅಧ್ಯಕ್ಷರಾದ ಡಾ. ಶಾಮ್ ಭಟ್, ಐಎಎಸ್ ನೆರವೇರಿಸುವರು.
ಮಾಜಿ ಸಂಸದ ನಳಿನ್ ಕುಮಾರ್ ಕಟೀಲು ಅವರು ಅಭಿವಂದನಾ ಭಾಷಣ ಮಾಡಲಿದ್ದಾರೆ.
ಶುಭಾಶಂಸನೆಯನ್ನು ದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರ ಸಂಸದ ಕ್ಯಾಪ್ಟನ್ ಬ್ರಿಜೇಶ್ ಚೌಟ ಮಾಡಲಿದ್ದಾರೆ. ಅಧ್ಯಕ್ಷತೆಯನ್ನು ಶಾಸಕ ಅಶೋಕ್ ಕುಮಾರ್ ರೈ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ, ಪುತ್ತೂರಿನ ಮಾಜಿ ಶಾಸಕ ಸಂಜೀವ ಮಠಂದೂರು, ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ, ಮಾಸ್ ಲಿ. ಮಂಗಳೂರು. ಅಧ್ಯಕ್ಷರಾದ ಸೀತಾರಾಮ ರೈ ಸವಣೂರು ಉಪಸ್ಥಿತರಿರಲಿದ್ದಾರೆ.
ಪುತ್ತೂರು ಉಪವಿಭಾಗದ ವ್ಯಾಪ್ತಿಯ ಪುತ್ತೂರು, ಸುಳ್ಯ, ಕಡಬ ಹಾಗೂ ಬೆಳ್ತಂಗಡಿ ತಾಲೂಕುಗಳ ಎಲ್ಲ ಸಹಕಾರಿ ಬಂಧುಗಳ ಅಭಿವಂದನಾ ಸಮಿತಿಯು ಈ ಅಭಿನಂದನಾ ಕಾರ್ಯಕ್ರಮವನ್ನು ಹಮ್ಮಿಕೊಂಡಿದೆ ಎಂದು ಸಹಕಾರಿ ಬಂಧುಗಳ ಅಭಿವಂದನಾ ಸಮಿತಿಯ ಪ್ರಕಟಣೆ ತಿಳಿಸಿದೆ.