Published
12 months agoon
By
Akkare News
ಮಂಗಳೂರು ಮಾರ್ಚ್ 20: ಬಿಸಿಲಿನ ಬೇಗೆಯಿಂದ ಕಂಗೆಟ್ಟಿದ್ದ ಕರಾವಳಿಗೆ ಮತ್ತೊಮ್ಮೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದ ವಿವಿಧೆಡೆ ಇದೇ 22ರಿಂದ ನಾಲ್ಕು ದಿನಗಳು ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.


ದಕ್ಷಿಣ ಕನ್ನಡ, ಚಿಕ್ಕಮಗಳೂರು, ಮೈಸೂರು, ಕೊಡಗು, ಹಾಸನ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ ಮತ್ತು ಮಂಡ್ಯ ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ 22ರಂದು ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ ಮತ್ತು ರಾಯಚೂರು ಜಿಲ್ಲೆಯ ಪ್ರತ್ಯೇಕ ಸ್ಥಳಗಳಲ್ಲಿ ತುಂತುರು ಮಳೆಯಾಗುವ ಸಂಭವವಿದೆ. ಕೆಲ ಸ್ಥಳಗಳಲ್ಲಿ 30 ರಿಂದ 40 ಕಿ.ಮೀ. ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.


23, 24 ಮತ್ತು 25 ರಂದು ಕೂಡ ರಾಜ್ಯದ ವಿವಿಧೆಡೆ ಮಳೆಯಾಗುವ ಸಾಧ್ಯತೆಯಿದೆ. ಮುಂದಿನ ಐದು ದಿನಗಳು ಗರಿಷ್ಠ ಉಷ್ಣಾಂಶದಲ್ಲಿ ದೊಡ್ಡ ಬದಲಾವಣೆಯಿಲ್ಲ ಎಂದು ಇಲಾಖೆ ಮುನ್ಸೂಚನೆ ನೀಡಿದೆ



