Published
2 weeks agoon
By
Akkare Newsಮಾ. 25: ಮಾ.25ರ ಮಂಗಳವಾರ ಕೊಡಗು, ಹಾಸನ ಮತ್ತು ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಉಡುಪಿ, ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಹಾವೇರಿ, ಬಾಗಲಕೋಟೆ, ಗದಗ ಮತ್ತು ಮೈಸೂರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಲಘು ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಭಾರತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಇನ್ನು ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಭಾಗಶ: ಮೋಡ ಕವಿದ ವಾತಾವರಣ ಇರಲಿದ್ದು, ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 32°C ಮತ್ತು 22°C ಇರುವ ಸಾಧ್ಯತೆ ಇದೆ.
ಮಾ. 26ರಂದು ಚಿಕ್ಕಮಗಳೂರು, ಕೊಡಗು ಮತ್ತು ಹಾಸನ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಮೈಸೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಹಗುರ ಮಳೆ/ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ದಕ್ಷಿಣ ಒಳನಾಡಿನ ಒಂದೆರಡು ಕಡೆಗಳಲ್ಲಿ ಗಂಟೆಗೆ 30-40 ಕಿಮೀ ವೇಗದ ಗಾಳಿ ಬೀಸುವ ಸಾಧ್ಯತೆಯಿದೆ. ರಾಜ್ಯದ ಉಳಿದ ಭಾಗಗಳಲ್ಲಿ ಒಣ ಹವೆ ಇರುವ ಸಾಧ್ಯತೆ ಇದೆ. ಮಾ. 27ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ. ಮಾ.28ರಂದು ರಾಜ್ಯದಾದ್ಯಂತ ಒಣ ಹವೆ ಇರುವ ಸಾಧ್ಯತೆಯಿದೆ.