Published
11 months agoon
By
Akkare News
ಹುಬ್ಬಳ್ಳಿ ಐದು ವರ್ಷದ ಬಾಲಕಿಯನ್ನು ಅಪಹರಿಸಿ, ಕೊಲೆಗೈದಿದ್ದ ಆರೋಪಿ ಪೊಲೀಸರ ಗುಂಡೇಟಿಗೆ ಬಲಿಯಾಗಿದ್ದಾನೆ.


ಇದೀಗ ಘಟನೆಗೆ ಸಂಬಂಧಿಸಿದಂತೆ ಬಾಲಕಿಯ ಕುಟುಂಬಕ್ಕೆ ಸರ್ಕಾರದಿಂದ 10 ಲಕ್ಷ ಪರಿಹಾರ ನೀಡಲಾಗುವುದು ಎಂದು ವಿಧಾನ ಪರಿಷತ್ ಮುಖ್ಯ ಸಚೇತಕ ಸಲೀಂ ಅಹಮದ್ ಘೋಷಿಸಿದ್ದಾರೆ.


ಧಾನ ಪರಿಷತ್ ಕಾಂಗ್ರೆಸ್ ಮುಖ್ಯ ಸಚೇತಕ ಸಲೀಂ ಅಹಮದ್ ಮೃತ ಬಾಲಕಿಯ ಕುಟುಂಬಕ್ಕೆ 10 ಲಕ್ಷ ಪರಿಹಾರ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.


ಇನ್ನು ಆರೋಪಿಯನ್ನು ಅರೆಸ್ಟ್ ಮಾಡಲು ತೆರಳಿದಾಗ ಪಿಎಸ್ಐ ಅನ್ನಪೂರ್ಣ ಹಾಗೂ ಇಬ್ಬರು ಕಾನ್ಸ್ಟೇಬಲ್ ಮೇಲೆ ಆರೋಪಿ ಹಲ್ಲೆ ಮಾಡಿದ್ದಾನೆ. ಕೂಡಲೇ ಪಿಎಸ್ಐ ಅನ್ನಪೂರ್ಣ ಅವರು ಆರೋಪಿ ಮೇಲೆ ತಮ್ಮ ಆತ್ಮ ರಕ್ಷಣೆಗಾಗಿ ಗುಂಡು ಹಾರಿಸಿದ್ದಾರೆ. ಈ ವೇಳೆ ತಕ್ಷಣ ಆತನನ್ನು ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಯಿತು. ಆದರೆ ಚಿಕಿತ್ಸೆ ಫಲಿಸಿದೆ ಆರೋಪಿ ಇದೀಗ ಗುಂಡೇಟಿಗೆ ಬಲಿಯಾಗಿದ್ದಾನೆ ಎಂದು ತಿಳಿದುಬಂದಿದೆ.


