Published
3 days agoon
By
Akkare Newsಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದ ಪ್ರಕರಣದಲ್ಲಿ ಜೈಲು ಸೇರಿದ್ದ ಬಿಗ್ ಬಾಸ್ ಮಾಜಿ ಸ್ಪರ್ಧಿ ರಜತ್ ಕಿಶನ್ ಅವರನ್ನು ಮತ್ತೆ ಪೊಲೀಸರು ಬಂಧಿಸಿದ್ದಾರೆ.
ಇತ್ತೀಚೆಗೆ ಬಿಗ್ ಬಿಗ್ ಬಾಸ್ ಮಾಜಿ ಸ್ಪರ್ಧಿಗಳಾದ ರಜತ್ ಮತ್ತು ವಿನಯ್ ಗೌಡ ಖಾಸಗಿ ಕಾರ್ಯಕ್ರಮ ಮುಗಿದ ಬಳಿಕ ಮಚ್ಚು ಹಿಡಿದು ರೀಲ್ಸ್ ಮಾಡಿದ್ದರು. ಈ ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು.
ಈ ಸಂಬಂಧ ಬಸವೇಶ್ವರ ನಗರ ಪೊಲೀಸರು, ಶಸ್ತ್ರಾಸ್ತ್ರ ಕಾಯ್ದೆಯಡಿಯಲ್ಲಿ ಕೇಸ್ ದಾಖಲಿಸಿಕೊಂಡು ಇಬ್ಬರನ್ನು ಬಂಧಿಸಿದ್ದರು.
ಕೆಲ ದಿನಗಳ ಬಳಿಕ ಕೋರ್ಟ್ ಇಬ್ಬರಿಗೆ ಷರತ್ತುಬದ್ಧ ಜಾಮೀನು ನೀಡಲಾಗಿತ್ತು. ಪ್ರಕರಣ ಸಂಬಂಧ ವಿಚಾರಣೆಗೆ ರಜತ್ ಹಾಜರಾಗಿರಲಿಲ್ಲ. ಹೀಗಾಗಿ ರಜತ್ ನನ್ನು ಪೊಲೀಸರು ಬಂಧಿಸಿದ್ದಾರೆ.
ಜಾಮೀನು ಷರತ್ತು ಉಲ್ಲಂಘನೆ ಮಾಡಿದ ರಜತ್ನನ್ನು ಪೊಲೀಸರು ಬಂಧಿಸಿ 24ನೇ ಎಸಿಜೆಂ ಕೋರ್ಟ್ ಗೆ ಹಾಜರುಪಡಿಸಲಿದ್ದಾರೆ.
ವಿಚಾರಣೆಗೆ ಹಾಜರಾಗದ ಹಿನ್ನೆಲೆ ರಜತ್ ವಿರುದ್ಧ ನ್ಯಾಯಾಲಯ ಜಾಮೀನು ರಹಿತ ವಾರಂಟ್ ಹೊರಡಿಸಿತ್ತು.
ಇನ್ನೊಂದು ಕಡೆ ವಿನಯ್ ಗೌಡ ಅವರ ನಿವಾಸಕ್ಕೂ ಪೊಲೀಸರು ಭೇಟಿ ನೀಡಿದ್ದು, ಅವರನ್ನು ಕೂಡ ಬಂಧಿಸುವ ಸಾಧ್ಯತೆಯಿದೆ.