Published
3 weeks agoon
By
Akkare Newsಕಾಶ್ಮೀರದಲ್ಲಿ ಕನ್ನಡಿಗರು ಉಗ್ರರ ದಾಳಿಗೆ ಗುರಿಯಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಿಗಳ ಸಭೆ ನಡೆಸಿ ಮಾಹಿತಿ ಪಡೆದುಕೊಂಡಿದ್ದಾರೆ ಮತ್ತು ತುರ್ತು ಕ್ರಮಕ್ಕೆ ನೆರವಾಗಲು ಸಚಿವ ಸಂತೋಷ ಲಾಡ್ ಅವರಿಗೆ ಕಾಶ್ಮೀರಕ್ಕೆ ಧಾವಿಸಲು ಸೂಚನೆ ನೀಡಿದ್ದಾರೆ.
ಸಿಎಂ ಸೂಚನೆ ಮೇರೆಗೆ ಸಚಿವ ಲಾಡ್ ಕಾಶ್ಮೀರಕ್ಕೆ ಹೊರಟಿದ್ದಾರೆ.
ಮುಖ್ಯ ಕಾರ್ಯದರ್ಶಿಗಳು ಹಾಗೂ ಹಿರಿಯ ಪೊಲೀಸ್ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡ ಮುಖ್ಯಮಂತ್ರಿಯವರು ತಕ್ಷಣ ಕಾರ್ಯಪ್ರವತ್ತರಾಗುವಂತೆ ಸೂಚನೆ ನೀಡಿದರು.
ಸಿಎಂ ಅವರ ಸೂಚನೆ ಮೇರೆಗೆ ಐಪಿಎಸ್ ಅಧಿಕಾರಿ ಚೇತನ್ ಆರ್ ಮತ್ತು ಸಿಬ್ಬಂದಿ ಹಾಗೂ ಅಧಿಕಾರಿಗಳ ತಂಡ ಕಾಶ್ಮೀರಕ್ಕೆ ತೆರಳಿದೆ. ಮುಂದಿನ ಕ್ರಮಗಳ ಉಸ್ತುವಾರಿ ನೋಡಿಕೊಳ್ಳುವಂರೆ ದೆಹಲಿಯ ನಿವಾಸಿ ಆಯುಕ್ತರಿಗೆ ಸೂಚನೆ ನೀಡಲಾಗಿದೆ.