Published
9 hours agoon
By
Akkare Newsಬೆಂಗಳೂರು : ಇಷ್ಟು ದಿನ ಖಾಸಗಿ ಎಜೆನ್ಸಿಯವರು 108 ಆಂಬುಲೆನ್ಸ್ ಸೇವೆಯನ್ನು ಒದಗಿಸುತ್ತಿದ್ದರು. ಆದರೆ ಇನ್ಮುಂದೆ ರಾಜ್ಯದಲ್ಲಿ 108 ಆಂಬುಲೆನ್ಸ್ ಸರ್ವಿಸ್ ರಾಜ್ಯ ಸರ್ಕಾರವೆ ನೀಡುತ್ತದೆ ಎಂದು ಆರೋಗ್ಯ ಸಚವ ದಿನೇಶ್ ಗುಂಡೂರಾವ್ ತಿಳಿಸಿದರು.
ಆರೋಗ್ಯ ಇಲಾಖೆಯ ಕುರಿತು ಬೆಂಗಳೂರಿನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಇನ್ಮುಂದೆ ಸರ್ಕಾರವೇ 108 ಆ್ಯಂಬುಲೆನ್ಸ್ ಕಾರ್ಯ ನಿರ್ವಹಿಸುತ್ತೆ. ಯಾವುದೇ ಏಜೆನ್ಸಿ ಮೂಲಕ ಕಾರ್ಯ ನಿರ್ವಹಿಸುವುದಿಲ್ಲ ಎಂದು ಹೇಳಿದ್ದಾರೆ.108 ಆ್ಯಂಬುಲೆನ್ಸ್ ಸಿಬ್ಬಂದಿ ಮೂರು ಶಿಫ್ಟ್ ವಿಚಾರವಾಗಿ ಮಾತನಾಡಿದ ಅವರು, ಇದು ಏಜೆನ್ಸಿ ಮೂಲಕ ನಡೆಯುತ್ತದೆ. ಹೀಗಾಗಿ ಸಿಬ್ಬಂದಿಗಳು ಏಜೆನ್ಸಿ ಜೊತೆ ಮಾತನಾಡಬೇಕು ಎಂದಿದ್ದಾರೆ.