Connect with us

ಇತರ

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ರಕ್ತನಿಧಿ ವಿಭಾಗ ವೆನ್ ಲಾಕ್, ಆಸ್ಪತ್ರೆ ಮಂಗಳೂರು. ಕಲ್ಲೂರು ಎಜುಕೇಷನ್ ಟ್ರಸ್ಟ್ (ರಿ) ಕಾರವಾರ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಹಾಗೂ ಮಾಹಿತಿ ಶಿಬಿರ

Published

on

ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ರಕ್ತನಿಧಿ ವಿಭಾಗ ವೆನ್ ಲಾಕ್, ಆಸ್ಪತ್ರೆ ಮಂಗಳೂರು. ಕಲ್ಲೂರು ಎಜುಕೇಷನ್ ಟ್ರಸ್ಟ್ (ರಿ) ಕಾರವಾರ ಇದರ ಸಂಯುಕ್ತ ಆಶ್ರಯದಲ್ಲಿ ಬೃಹತ್ ರಕ್ತದಾನ ಯೂತ್ ರೆಡ್ ಕ್ರಾಸ್, ರೋವರ್ಸ್,/ ರೇಂಜರ್ಸ್ ಘಟಕ… ಹಿರಿಯ ವಿದ್ಯಾರ್ಥಿ ಸಂಘ ಇದರ ಸಹಯೋಗದೊಂದಿಗೆ ಬೃಹತ್ ರಕ್ತದಾನ ಹಾಗೂ ಮಾಹಿತಿ ಶಿಬಿರ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮುಡಿಪು ಇಲ್ಲಿ ನಡೆಯಿತು.



ಕಾರ್ಯಕ್ರಮವನ್ನು ಗೇರು ಅಭಿವೃದ್ಧಿ ನಿಗಮ ಅಧ್ಯಕ್ಷರಾದ ಮಮತಾ ಗಟ್ಟಿ, ಗಣ್ಯರ ಸಮ್ಮುಖದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು. ಕಾಲೇಜು ಪ್ರಾಂಶುಪಾಲರಾದ ಸತೀಶ್ ಗಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯ ಅತಿಥಿಗಳಾಗಿ ಕಾಲೇಜು ಅಭಿವೃದ್ಧಿ ಸಮಿತಿ ಕಾರ್ಯಾಧ್ಯಕ್ಷರಾದ ಪ್ರಶಾಂತ್ ಕಾಜವ,ಕಲ್ಲೂರು ಎಜುಕೇಷನ್ ಟ್ರಸ್ಟ್ ಅಧ್ಯಕ್ಷರಾದ ಲ/ ಇಬ್ರಾಹಿಂ ಕಲ್ಲೂರು, ಪಶುಪಾಲನಾ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ ಉಪ ನಿರ್ದೇಶಕರಾದ ಡಾ.ಅರುಣ್ ಕುಮಾರ್ ಶೆಟ್ಟಿ, ಅತಿಥಿಗಳಾಗಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶೆಷಪ್ಪ ಕೆ, ಯುವ ರೆಡ್ ಕ್ರಾಸ್ ಘಟಕದ ಹೈದರಾಲಿ, ಸಂಯೋಜಕರು ಆಂತರಿಕ ಗುಣಮಟ್ಟ ಕೋಶ ಇದರ ಸಂಯೋಜಕರಾದ ಕವಿತಾ ಎಂ ಎಲ್, ರೋವರ್ಸ್ ಘಟಕದ ಸಂಚಾಲಕರಾದ ಮಹಮ್ಮದ್ ರಫೀಕ್, ರೇಂಜರ್ಸ್ ಘಟಕದ ಸಂಚಾಲಕರಾದ ಶ್ರೀ ಮತಿ ಅಕ್ಷತಾ ಸುವರ್ಣ, ಆರೋಗ್ಯ ಶಿಬಿರದ ಸಂಯೋಜಕರು ಕಲ್ಲೂರು ಎಜುಕೇಷನ್ ಟ್ರಸ್ಟ್ ನ ಟ್ರಸ್ಟಿ ಅಝೀಝ್ ಕಲ್ಲೂರು, ಮಾಧ್ಯಮ ವಿಭಾಗದ ಕಾರ್ಯದರ್ಶಿ ಉಮ್ಮರ್ ಸಾಲೆತ್ತೂರು ಉಪಸ್ಥಿತರಿದ್ದರು.

 

ಸಭೆಯನ್ನು ಉದ್ದೇಶಿಸಿ ಮಮತಾ ಗಟ್ಟಿ ಮಾತನಾಡಿ ಹಲವು ಶ್ರೇಷ್ಠ ದಾನಗಳಲ್ಲಿ ರಕ್ತದಾನ ಕೂಡ ಒಂದು ಇದನ್ನು ದಾನಿಗಳಿಂದ ಸಂಗ್ರಹಿಸಿ ತುರ್ತು ಸಂದರ್ಭದಲ್ಲಿ ಇನ್ನೊಬ್ಬರ ಜೀವ ಉಳಿಸಲು ಸಹಕಾರಿ ಆಗುತ್ತದೆ ಇಂತಹ ಶ್ರೇಷ್ಠವಾದ ರಕ್ತದಾನ ಶಿಬಿರ ಏರ್ಪಡಿಸಿದ ಎಲ್ಲರಿಗೂ ಅಭಿನಂದನೆ ಸಲ್ಲಿಸಿ ಮಾತನಾಡಿದರು .. ಟ್ರಸ್ಟ್ ಅಧ್ಯಕ್ಷರಾದ ಲ/ ಇಬ್ರಾಹಿಂ ಕಲ್ಲೂರು ಮಾತನಾಡಿ ನಾನು ತನ್ನ ಜೀವನದಲ್ಲಿ ಯಾವುದೇ ಯಾವುದೇ ಆಸೆ ಆಕಾಂಕ್ಷೆ ಗಳು ಇಲ್ಲದೆ ನಡೆಸಿದ ಹಲವಾರು ಜನಪರವಾದ, ಅದರಲ್ಲೂ ಕೊರೋಣ ಲಾಕ್ ಡೌನ್ ಸಂದರ್ಭದಲ್ಲಿ ಮಾಡಿದ ಸೇವೆಯನ್ನು ಗುರುತಿಸಿ ನಾನು ಪ್ರತಿನಿಧಿಸುವ ಅಂತಾರಾಷ್ಟ್ರೀಯ ಲಯನ್ಸ್ ಸಂಸ್ಥೆಯು ನನ್ನನ್ನು ಸನ್ಮಾನಿಸಿತು.ಇದಕ್ಕಿಂತ ದೊಡ್ಡ ಸನ್ಮಾನ ಇನ್ನೊಂದಿಲ್ಲ ಎಂದು ಮಾತು ಮುಂದುವರಿಸಿದ ಅವರು ಕಾರವಾರದಲ್ಲಿ ಬಡವರ ಮಕ್ಕಳಿಗೆ ಉಚಿತ ಶಿಕ್ಷಣ ಕೊಡಬೇಕು ಎಂಬ ಮಹದಾಸೆ ಯೊಂದಿಗೆ ಸ್ಥಾಪಿಹಿದ ಶಿಕ್ಷಣ ಸಂಸ್ಥೆಯಲ್ಲಿ ಈಗ ಸಾವಿರಕ್ಕೂ ಅಧಿಕ ಮಕ್ಕಳು ವಿದ್ಯಾಭ್ಯಾಸ ಮಾಡುತ್ತಿರುವುದು ನಮಗೆ ಅಭಿಮಾನ ಎಂದು ಮನಪೂರ್ವಕವಾಗಿ ಮಾತಾಡಿದರು.

ಸಭೆಯ ಅಧ್ಯಕ್ಷತೆ ವಹಿಸಿ ಪ್ರಾಂಶುಪಾಲರಾದ ಸತೀಶ್ ಗಟ್ಟಿ ಅವರು ಪ್ರಾಸ್ತಾವಿಕವಾಗಿ ಮಾತನಾಡಿದರು. ರಕ್ತದಾನದ ಬಗ್ಗೆ ವೆನ್ ಲಾಕ್ ಆಸ್ಪತ್ರೆ ಅಧಿಕಾರಿ ಆಂಟನಿ ಡಿ ಸೋಜಾ ಮಾಹಿತಿ ನೀಡಿದರು. ಶಿಬಿರದಲ್ಲಿ ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರು ಸೇರಿ ಒಟ್ಟು 45 ಮಂದಿ ರಕ್ತದಾನಿಗಳಾದರು. ರಕ್ತದಾನಿಗಳಿಗೆ ಕಲ್ಲೂರು ಟ್ರಸ್ಟ್ ವತಿಯಿಂದ ಟೀ ಶರ್ಟ್ ವಿತರಿಸಲಾಯಿತು. ಟ್ರಸ್ಟ್ ಅಧ್ಯಕ್ಷರಾದ ಇಬ್ರಾಹಿಂ ಕಲ್ಲೂರು ಅವರ ಸಾಮಾಜಿಕ ಸೇವೆಯನ್ನು ಗುರುತಿಸಿ ಶಾಲು ಹೊದಿಸಿ ವೇದಿಕೆಯಲ್ಲಿ ಇದ್ದ ಗಣ್ಯರು ಗೌರವಿಸಿದರು. ಯುವ ರೆಡ್ ಕ್ರಾಸ್ ಸಂಸ್ಥೆ ಪ್ರಮುಖರಾದ ಹೈದರಾಲಿ ಎಲ್ಲರನ್ನೂ ಸ್ವಾಗತಿಸಿದರು.ಕಾರ್ಯಕ್ರಮದ ನಿರೂಪಣೆಯನ್ನು ಶ್ರೀ ಮತಿ ಅಕ್ಷತಾ ಸುವರ್ಣ ನಿರ್ವಹಿಸಿದರು.ಕೊನೆಯಲ್ಲಿ ವಿದ್ಯಾರ್ಥಿ ನಾಯಕರಾದ ಶಹೀದ್ ಧನ್ಯವಾದ ಅರ್ಪಿಸಿದರು.

 

Continue Reading
Click to comment

Leave a Reply

Your email address will not be published. Required fields are marked *

Advertisement