Published
16 hours agoon
By
Akkare Newsಪುತ್ತೂರು ಮೇ 16: ನಾನು ಯಾವತ್ತೂ ದೇಶದ ಪ್ರಧಾನಿಯನ್ನು ಅವಹೇಳನ ಮಾಡಿಲ್ಲ, ನಾನು ಪಾಕಿಸ್ತಾನ ಪ್ರಧಾನಿ ವಿರುದ್ಧ ಹಾಕಿದ ಪೋಸ್ಟ್ ಅನ್ನ ಬಿಜೆಪಿಯವರು ತಿರುಚಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಪೋಸ್ಟ್ ಹಾಕಿರುವುದಾಗಿ ಪೋಲೀಸರಿಗೆ ದೂರು ನೀಡಿದ್ದಾರೆ ಎಂದು ಪುತ್ತೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ, ಕಾಂಗ್ರೇಸ್ ಮುಖಂಡ ಅಮಳ ರಾಮಚಂದ್ರ ಸ್ಪಷ್ಟಪಡಿಸಿದ್ದಾರೆ.
ಪಹಲ್ಗಾಮ್ ನಲ್ಲಿ ಪಾಕಿಸ್ತಾನ ಯಗ್ರರನ್ನು ಬಳಸಿ, ಧರ್ಮ ಕೇಳಿ ಪ್ರವಾಸಿಗರನ್ನು ಕೊಂದಿದ್ದಾರೆ. ಇದೇ ವಿಚಾರವನ್ನಿಟ್ಟು ಪಾಕ್ ಪ್ರಧಾನಿಯನ್ನು ಉದ್ಧೇಶಿಸಿ ಕಾರ್ಕೋಟಕ ವಿಷ ಎಂದು ಪೇಸ್ಬುಕ್ ನಲ್ಲಿ ಪೋಸ್ಟ್ ಹಾಕಿದ್ದೇನೆ. ಈ ಪೋಸ್ಟ್ ನಲ್ಲಿ ನಮ್ಮ ಪ್ರಧಾನಿ ನರೇಂದ್ರ ಮೋದಿಯ ವಿರುದ್ಧ ನಾನು ಯಾವುದೇ ಬರಹ ಬರೆದಿಲ್ಲ. ಆದರೆ ಬಿಜೆಪಿಯವರು ಇದನ್ನು ಪ್ರಧಾನಿ ಮೋದಿಯವರ ವಿರುದ್ಧ ಮಾಡಿರುವ ಪೋಸ್ಟ್ ಎಂದು ಪೋಲೀಸರಿಗೆ ದೂರು ನೀಡಿದ್ದಾರೆ. ಬಿಜೆಪಿಯವರ ಮನಸ್ಸಲ್ಲಿ ಪ್ರಧಾನಿಯನ್ನು ಅವಹೇಳನ ಮಾಡುವ ಉದ್ಧೇಶವಿದ್ದು, ಪಾಕ್ ಪ್ರಧಾನಿ ವಿರುದ್ಧ ಮಾಡಿದ ಪೋಸ್ಟ್ ಅನ್ನ ನರೇಂದ್ರ ಮೋದಿ ವಿರುದ್ಧ ಎಂದು ಬಿಂಬಿಸಿದ್ದಾರೆ.ಪೋಸ್ಟ್ ಮಾಡಿರೋದು ನನ್ನ ವೈಯುಕ್ತಿಕ ಪೇಜ್ ನಲ್ಲಾಗಿದ್ದು, ಇದಕ್ಕೂ ನಗರಾಭಿವೃದ್ಧಿ ಪ್ರಾಧಿಕಾರಕ್ಕೂ ಯಾವುದೇ ಸಂಬಂಧವಿಲ್ಲ. ಇದು ನನ್ನ ವ್ಯಕ್ತಿಗತ ಅಭಿಪ್ರಾಯವಾಗಿದ್ದು, ಇದೇ ಕಾರಣಕ್ಕೆ ಮಾಜಿ ಶಾಸಕರಾದ ಸಂಜೀವ ಮಠಂದೂರು ನನ್ನ ಬಗ್ಗೆ ಅವಹೇಳನಕಾರಿ ಮಾತನಾಡಿದ್ದಾರೆ.
‘