Published
12 hours agoon
By
Akkare Newsಭಾರತ ಮತ್ತು ಪಾಕಿಸ್ತಾನ ನಡುವೆ ಯುದ್ಧ ಸಂದಿಗ್ಧ ಸ್ಥಿತಿ ನಿರ್ಮಾಣವಾದಾಗ ಪಾಕಿಸ್ತಾನ ಸೇನೆ ಮತ್ತು ಐಎಸ್ಐಗೆ ಮಾಹಿತಿ ಒದಗಿಸಿದ ಆರೋಪದ ಮೇಲೆ ಹರಿಯಾಣದ ಯೂಟ್ಯೂಬರ್ ಸೇರಿದಂತೆ ಆರು ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಈ ಪ್ರಕರಣದಲ್ಲಿ ಹರಿಯಾಣ ಮೂಲದ ಟ್ರಾವೆಲ್ ವ್ಲಾಗರ್ ಜ್ಯೋತಿ ಮಲ್ಹೋತ್ರಾ, ಮಸ್ತ್ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ ಸೇರಿದಂತೆ ಆರು ಜನರನ್ನು ಬಂಧಿಸಲಾಗಿದೆ.
.
ಟ್ರಾವೆಲ್ ವಿಥ್ ಜೋ ಎಂಬ ಹೆಸರಿನ ಯೂಟ್ಯೂಬ್ ಚಾನೆಲ್ ನಡೆಸುತ್ತಿದ್ದ ಜ್ಯೋತಿ ಮಲ್ಹೋತ್ರಾ, 2023ರಲ್ಲಿ ಪಾಕಿಸ್ತಾನಕ್ಕೆ ಭೇಟಿ ನೀಡಿದ್ದಳು. ಆ ಭೇಟಿ ವೇಳೆ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಪರಿಚಯವಾಗಿದ್ದ. ಈಗ ದೆಹಲಿಯಲ್ಲಿರುವ ಪಾಕಿಸ್ತಾನ ಹೈ ಕಮಿಷನ್ನಲ್ಲಿ ಕೆಲಸ ಮಾಡುತ್ತಿದ್ದ. ಈತನೇ ಜ್ಯೋತಿಯನ್ನು ಪಾಕಿಸ್ತಾನ ಗುಪ್ತಚರ ಇಲಾಖೆಗೆ ಪರಿಚಯಿಸಿದ್ದ. ವಾಟ್ಸಾಪ್, ಟೆಲಿಗ್ರಾಮ್ ಮತ್ತು ಸ್ನ್ಯಾಪ್ಚಾಟ್ ಮೂಲಕ ಜ್ಯೋತಿಯು ಶಕೀರ್ ಅಲಿಯಾಸ್ ರಾಣಾ ಶಹಬಾಜ್ ಸೇರಿದಂತೆ ಅನೇಕರ ಜೊತೆ ಸಂಪರ್ಕದಲ್ಲಿದ್ದಳು. ಶಕೀರ್ನ ಸಂಖ್ಯೆಯನ್ನು ‘ಜಟ್ ರಾಂಧವ’ ಎಂದು ಸೇವ್ ಮಾಡಿಕೊಂಡಿದ್ದಳು.
ಜ್ಯೋತಿ ಭಾರತದ ಸೂಕ್ಷ್ಮ ಸ್ಥಳಗಳ ಬಗ್ಗೆ ಮಾಹಿತಿ ಹಂಚಿಕೊಂಡಿದ್ದಳು. ಜೊತೆಗೆ ಎಹ್ಸಾನ್-ಉರ್-ರಹೀಮ್ ಅಲಿಯಾಸ್ ಡ್ಯಾನಿಶ್ ಜೊತೆ ಆಪ್ತವಾಗಿ ಇರುತ್ತಿದ್ದಳು. ಆತನ ಜೊತೆ ಇಂಡೋನೇಷ್ಯಾದ ಬಾಲಿಗೆ ಹೋಗಿ ಬಂದಿದ್ದಳು. ಡ್ಯಾನಿಶ್ ದೆಹಲಿಯಲ್ಲಿದ್ದಾಗ, ಆಗಾಗ ಭೇಟಿ ಮಾಡುತ್ತಿದ್ದರಿಂದ ಅನುಮಾನ ಹುಟ್ಟುಹಾಕಿತ್ತು.
ರಾಜ್ಯಶಾಸ್ತ್ರ ವಿದ್ಯಾರ್ಥಿಯಿಂದಲೂ ಪಾಕಿಸ್ತಾನಕ್ಕೆ ಸಹಾಯ
ಮಸ್ತ್ಗಢ ಚೀಕಾ ಗ್ರಾಮದ ದೇವೇಂದ್ರ ಸಿಂಗ್ ವಿಚಾರಣೆಯ ಸಂದರ್ಭದಲ್ಲಿ ಪಾಕಿಸ್ತಾನ ಗುಪ್ತಚರ ಸಂಸ್ಥೆ ಐಎಸ್ಐ ಜೊತೆ ಸಂಪರ್ಕದಲ್ಲಿರುವುದಾಗಿ ಬಹಿರಂಗಪಡಿಸಿದ್ದಾನೆ. ದೇವೇಂದ್ರ ಸಿಂಗ್ ಆಪರೇಷನ್ ಸಿಂಧೂರ ಕಾರ್ಯಾಚರಣೆಯ ಬಗ್ಗೆಯೂ ಐಎಸ್ಐಗೆ ಕಾಲಕಾಲಕ್ಕೆ ಮಾಹಿತಿಯನ್ನು ರವಾನಿಸಿದ್ದಾನೆ. ಗುಪ್ತಚರ ಮಾಹಿತಿ ಆಧಾರದ ಮೇಲೆ ಕೈಥಲ್ ಜಿಲ್ಲಾ ಪೊಲೀಸರು ದೇವೇಂದ್ರ ಸಿಂಗ್ನನ್ನು ಬಂಧಿಸಿದ್ದಾರೆ.
ಸೈಬರ್ ಪೊಲೀಸ್ ಠಾಣೆಯಲ್ಲಿ ದೇವೆಂದ್ರ ಸಿಂಗ್ ಬಳಿ ಪತ್ತೆಯಾದ ಎಲೆಕ್ಟ್ರಾನಿಕ್ ವಸ್ತುಗಳ ಬಗ್ಗೆ ಸಂಪೂರ್ಣ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ವೀರಭನ್ ತಿಳಿಸಿದ್ದಾರೆ. ದೇವೇಂದ್ರ ಸಿಂಗ್ ಪಂಜಾಬ್ನ ಕಾಲೇಜುವೊಂದರಲ್ಲಿ ಎಂಎ ರಾಜ್ಯಶಾಸ್ತ್ರ ವಿದ್ಯಾರ್ಥಿಯಾಗಿದ್ದು, ಕಳೆದ ವರ್ಷ ನವೆಂಬರ್ನಲ್ಲಿ ಪಾಕಿಸ್ತಾನದ ನಂಕಾನಾ ಸಾಹಿಬ್ ಗುರುದ್ವಾರಕ್ಕೆ ತೀರ್ಥಯಾತ್ರೆಗೆಂದು ಹೋಗಿದ್ದ. ಆಗ ಪಾಕಿಸ್ತಾನಿ ಗುಪ್ತಚರ ಏಜೆಂಟ್ಗಳು ಈತನೊಂದಿಗೆ ಸಂಪರ್ಕ ಸಾಧಿಸಿದ್ದಾರೆ. ಅಂದಿನಿಂದ ಪಾಕ್ ಐಎಸ್ಐಗೆ ದೇವೇಂದ್ರ ಸಿಂಗ್ ನಿರಂತರವಾಗಿ ಮಾಹಿತಿ ನೀಡುತ್ತಿದ್ದ ಎನ್ನಲಾಗಿದೆ.