Published
8 hours agoon
By
Akkare Newsರಾಜ್ಯದಲ್ಲಿ ಮತ್ತೆ ಕೊರೋನಾ ಸೋಂಕಿನ ಪ್ರಮಾಣ ಹೆಚ್ಚುತ್ತಿದ್ದು, ಇಂದು ಐವರಿಗೆ ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಅಲ್ಲದೇ ಕೋರೋನಾ ಸೋಂಕಿತ ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾನೆ.
ಈ ಬಗ್ಗೆ ರಾಜ್ಯ ಆರೋಗ್ಯ ಇಲಾಖೆಯಿಂದ ಕೋವಿಡ್ ಬುಲೆಟಿನ್ ಬಿಡುಗಡೆ ಮಾಡಲಾಗಿದ್ದು, ಬೆಂಗಳೂರು ನಗರದಲ್ಲಿ 92 ಮಂದಿಯನ್ನು ಕೊರೋನಾ ಪರೀಕ್ಷೆಗೆ ಒಳಪಡಿಸಲಾಗಿತ್ತು. ಇವರಲ್ಲಿ ಇಬ್ಬರಿಗೆ ಪಾಸಿಟಿವ್ ಬಂದಿದ್ದರೇ, ಓರ್ವ ವ್ಯಕ್ತಿ ಸಾವನ್ನಪ್ಪಿದ್ದಾರೆ ಎಂದಿದೆ.
ಇನ್ನೂ ಮೈಸೂರಿನಲ್ಲಿ ಮೂವರು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಬ್ಬರಿಗೆ ಪಾಸಿಟಿವ್ ಬಂದಿದೆ. ವಿಜಯನಗರದಲ್ಲಿ ಒಬ್ಬರಿಗೆ ಸೇರಿದಂತೆ ರಾಜ್ಯಾಧ್ಯಂತ ಐವರಿಗೆ ಕೊರೋನಾ ಪಾಸಿಟಿವ್ ದೃಢಪಟ್ಟಿದೆ. ಹೀಗಾಗಿ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 38ಕ್ಕೆ ಏರಿಕೆಯಾಗಿದೆ.
ಅಪಘಾತದ ರಭಸಕ್ಕೆ ಕಾರು ಪಲ್ಟಿಯಾಗಿದ್ದರೂ. ಅದೃಷ್ಟವಶಾತ್ ಕಾರಿನಲ್ಲಿದ್ದ ಪ್ರಯಾಣಿಕರಿಗೆ ಯಾವುದೇ ರೀತಿಯ ಗಾಯಗಳಾಗಿಲ್ಲ ಎಂದು ವರದಿಯಾಗಿದೆ.