Published
9 months agoon
By
Akkare News
ಪುತ್ತೂರು, ಜೂ. 16: ತುಂಬು ಗರ್ಭಿಣಿಯೊಬ್ಬರು ನೇಣು ಬಿಗಿದು ಜೀವಾಂತ್ಯ ಮಾಡಿಕೊಂಡ ಹೃದಯವಿದ್ರಾವಕ ಘಟನೆ ನಗರದ ಚಿಕ್ಕಪುತ್ತೂರಿನಲ್ಲಿ ಜೂ. 15ರ ರಾತ್ರಿ ವರದಿಯಾಗಿದೆ.
ಚಿಕ್ಕಪುತ್ತೂರಿನ ನಿವಾಸಿ, ಪುತ್ತಿಲ ಪರಿವಾರದ ಮುಖಂಡ ಚಿಂತನ್ ಅವರ ಪತ್ನಿ ರೇಶ್ಮಾ (28) ಮೃತ ದುರ್ದೈವಿ. ಏಳು ತಿಂಗಳ ಗರ್ಭಿಣಿಯಾಗಿದ್ದ ರೇಶ್ಮಾ ಅವರು, ತಾವು ವಾಸವಿದ್ದ ಬಾಡಿಗೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾರೆ.


ಘಟನೆಯ ವಿವರ:
ಸುರತ್ಕಲ್ ಮೂಲದ ರೇಶ್ಮಾ ಅವರನ್ನು ನಾಲ್ಕು ವರ್ಷಗಳ ಹಿಂದೆ ಚಿಕ್ಕಪುತ್ತೂರಿನ ಚಿಂತನ್ ಅವರಿಗೆ ವಿವಾಹ ಮಾಡಿಕೊಡಲಾಗಿತ್ತು. ಈ ದಂಪತಿಗೆ ಓರ್ವ ಪುತ್ರಿಯಿದ್ದಾಳೆ. ಚಿಂತನ್, ರೇಶ್ಮಾ ಮತ್ತು ಅವರ ಪುತ್ರಿ ಚಿಕ್ಕಪುತ್ತೂರಿನಲ್ಲಿ ಬಾಡಿಗೆ ಮನೆಯಲ್ಲಿ ವಾಸವಾಗಿದ್ದರು. ಜೂ. 15ರ ರಾತ್ರಿ ಮನೆಯಲ್ಲಿ ರೇಶ್ಮಾ ಅವರು ಜೀವಾಂತ್ಯ ಮಾಡಿಕೊಂಡಿದ್ದಾರೆಂದು ತಿಳಿದುಬಂದಿದೆ.



ವಿಷಯ ತಿಳಿಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಸ್ಥಳಕ್ಕೆ ದೌಡಾಯಿಸಿ, ಪರಿಶೀಲನೆ ನಡೆಸಿ ಮಹಜರು ಸಿದ್ಧಪಡಿಸಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಆಸ್ಪತ್ರೆಗೆ ಸಾಗಿಸಲಾಗಿದೆ. ಆತ್ಮಹತ್ಯೆಗೆ ನಿಖರವಾದ ಕಾರಣ ತನಿಖೆಯಿಂದ ತಿಳಿದುಬರಬೇಕಿದೆ.









