Published
11 hours agoon
By
Akkare Newsಈ ವರ್ಷದ ಸೆಪ್ಟೆಂಬರ್ ತಿಂಗಳಲ್ಲಿ ನಡೆಯಲ್ಲಿರುವ ಮಹಿಳೆಯರ ಏಕದಿನ ವಿಶ್ವಕನ ವೇಳಾಪಟ್ಟಿಯನ್ನು ಐಸಿಸಿ ಇಂದು ಬಿಡುಗಡೆ ಮಾಡಿದೆ.
ನಾಕೌಟ್ ಪಂದ್ಯಗಳನ್ನು ಆಡಲಾಗುತ್ತದೆ 2013ರ ನಂತರ ಮೊದಲ ಬಾರಿಗೆ ಭಾರತದಲ್ಲಿ ಮಹಿಳಾ ಏಕದಿನ ವಿಶ್ವಕಪ್ ಆಯೋಜಿಸಲಾಗುತ್ತಿದ್ದು ಈ ಪಂದ್ಯಾವಳಿಯ ಫೈನಲ್ ಪಂದ್ಯವು ನವೆಂಬರ್ ರಂದು ನಡೆಯಲಿದೆ ಇದಲ್ಲದೆ ಪಾಕಿಸ್ತಾನದ ಎಲ್ಲ ಪಂದ್ಯಗಳು ಶ್ರೀಲಂಕಾದಲ್ಲಿ ನಡೆಯಲಿವೆ.
ಭಾರತ ಹಾಗೂ ಪಾಕಿಸ್ತಾನ ನಡುವಿನ ಉದ್ವಿಗ್ನತೆಯಿಂದಾಗಿ ಉಭಯ ದೇಶಗಳ ತಂಡಗಳು ಮುಖಾಮುಖಿಯಾಗುವುದು ಅನುಮಾನ ಎನ್ನಲಾಗುತ್ತಿತ್ತು. ಆದರೆ ಐಸಿಸಿ ನಿಯಮಗಳಿಗೆ ಬದ್ಧರಾಗಿರುವ ಕಾರಣ ಟೀಂ ಇಂಡಿಯಾ, ಪಾಕಿಸ್ತಾನದ ವಿರುದ್ಧ ಪಂದ್ಯವನ್ನು ಆಡಲೇಬೇಕಾಗಿದೆ. ಹೀಗಾಗಿ ಏಕದಿನ ವಿಶ್ವಕಪ್ನಲ್ಲಿ ಉಭಯ ತಂಡಗಳ ನಡುವಿನ ಹೈವೋಲ್ವೇಜ್ ಕದನ ಅಕ್ಟೋಬರ್ 5 ರಂದು ಕೊಲಂಬೊದಲ್ಲಿ ನಡೆಯಲಿದೆ.
.ಭಾರತ ಮತ್ತು ಪಾಕಿಸ್ತಾನ ನಡುವಿನ ಉದ್ವಿಗ್ನತೆಯನ್ನು ಗಮನದಲ್ಲಿಟ್ಟುಕೊಂಡು, ಪಾಕಿಸ್ತಾನ ತನ್ನ ಎಲ್ಲ ಪಂದ್ಯಗಳನ್ನು ಶ್ರೀಲಂಕಾದಲ್ಲಿ ಆಡಲಿದೆ. ಬಿಸಿಸಿಐ ಮತ್ತು ಪಿಸಿಬಿ ನಡುವಿನ ಹೈಬ್ರಿಡ್ ಮಾದರಿಯ ಒಪ್ಪಂದದ ಪ್ರಕಾರ, ಪಾಕಿಸ್ತಾನ ತಂಡ ತನ್ನ ಎಲ್ಲ ಪಂದ್ಯಗಳನ್ನು ಕೊಲಂಬೊದಲ್ಲಿ ಆಡುತ್ತದೆ. ಈ ವರ್ಷದ ಆರಂಭದಲ್ಲಿ ಭಾರತವು ಚಾಂಪಿಯನ್ಸ್ ಟ್ರೋಫಿಯ ಎಲ್ಲ ಪಂದ್ಯಗಳನ್ನು ಪಾಕಿಸ್ತಾನದ ಬದಲಿಗೆ ದುಬೈನಲ್ಲಿ ಆಡಿತು. ಇದಕ್ಕೆ ಪ್ರತಿಕ್ರಿಯೆಯಾಗಿ, ಪಾಕಿಸ್ತಾನವು ಮುಂದಿನ ದಿನಗಳಲ್ಲಿ ಭಾರತದಲ್ಲಿ ಯಾವುದೇ ಪಂದ್ಯವನ್ನು ಆಡುವುದಿಲ್ಲ ಎಂದು ಪಿಸಿಬಿ ಹೇಳಿತ್ತು.
ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ತಂಡ ಅಕ್ಟೋಬರ್ 1 ರಂದು ತನ್ನ ಅಭಿಯಾನವನ್ನು ಪ್ರಾರಂಭಿಸಲಿದೆ. ಇದು ತನ್ನ ಮೊದಲ ಪಂದ್ಯವನ್ನು ಇಂದೋರ್ನ ಹೋಳ್ತರ್ ಕ್ರೀಡಾಂಗಣದಲ್ಲಿ ನ್ಯೂಜಿಲೆಂಡ್ ವಿರುದ್ಧ ಆಡಲಿದೆ. ಇದರ ನಂತರ, ತಂಡವು ಅಕ್ಟೋಬರ್ 8 ರಂದು ಕೊಲಂಬೊದಲ್ಲಿ ಪಾಕಿಸ್ತಾನವನ್ನು ಎದುರಿಸಲಿದೆ. ಆಸ್ಟ್ರೇಲಿಯಾ ಮತ್ತು ಇಂಗ್ಲೆಂಡ್ ನಡುವಿನ ಪ್ರಮುಖ ಪಂದ್ಯವು ಅಕ್ಟೋಬರ್ 22 ರಂದು ಇಂದೋರ್ನಲ್ಲಿ ನಡೆಯಲಿದೆ.
ವಿಶ್ವಕಪ್ ಪಂದ್ಯಗಳು ಭಾರತದ ಬೆಂಗಳೂರು, ಇಂದೋರ್, ಗುವಾಹಟಿ, ವಿಶಾಖಪಟ್ಟಣ ಮತ್ತು ಶ್ರೀಲಂಕಾದ ಕೊಲಂಬೊದಲ್ಲಿ ನಡೆಯಲಿವೆ. ಮೊದಲ ಸೆಮಿಫೈನಲ್ ಅಕ್ಟೋಬರ್ 29 ರಂದು ಗುವಾಹಟಿ ಅಥವಾ ಕೊಲಂಬೊದಲ್ಲಿ ನಡೆಯಲಿದೆ. ಎರಡನೇ ಸೆಮಿಫೈನಲ್ ಅಕ್ಟೋಬರ್ 30 ರಂದು ಬೆಂಗಳೂರಿನಲ್ಲಿ ನಡೆಯಲಿದೆ. ಫೈನಲ್ ಪಂದ್ಯ ನವೆಂಬರ್ 2 ರಂದು ಬೆಂಗಳೂರು ಅಥವಾ ಕೊಲಂಬೊದಲ್ಲಿ ನಡೆಯಲಿದೆ. ಪಾಕಿಸ್ತಾನದ ಮಹಿಳಾ ತಂಡ ಸೆಮಿಫೈನಲ್ ಮತ್ತು ಫೈನಲ್ ತಲುಪಿದರೆ, ಈ ಪಂದ್ಯಗಳನ್ನು ಕೊಲಂಬೊದಲ್ಲಿ ಆಯೋಜಿಸಲಾಗುತ್ತದೆ.