Connect with us

ಕ್ರೈಮ್ ನ್ಯೂಸ್

ಬೆಚ್ಚಿಬಿದ್ದ ಕಲಬುರಗಿ ಜನತೆ, ಮಾರಕಾಸ್ತ್ರಗಳಿಂದ ಕೊಚ್ಚಿ ತ್ರಿಬಲ್ ಮರ್ಡರ್!

Published

on

ಕಲಬುರಗಿ ನಗರದ ಹೊರವಲಯದ ಪಟ್ಟಣ ಗ್ರಾಮದ ಬಳಿ ಮಂಗಳವಾರ ತಡರಾತ್ರಿ 1:30ರ ಸುಮಾರಿಗೆ ಮೂವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿದ ಘಟನೆ ನಡೆದಿದೆ.


ಸಿದ್ಧಾರೂಢ (32), ಜಗದೀಶ್ (25), ರಾಮಚಂದ್ರ (35) ಕೊಲೆಯಾದವರು ಎಂದು ಗುರುತಿಸಲಾಗಿದ್ದು, ಮೂವರು ಸಂಬಂಧಿಕರಾಗಿದ್ದರು. ಮಂಗಳವಾರ ತಡರಾತ್ರಿ 1.30 ರ ಸುಮಾರಿಗೆ ಡ್ರೈವರ್ ಡಾಬಾಗೆ ನುಗ್ಗಿದ ಹಂತಕರು ಮಾರಾಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿದ್ದಾರೆ.

ಹಳೆಯ ವೈಷಮ್ಯದ ಹಿನ್ನೆಲೆಯಲ್ಲಿ ದುಷ್ಕರ್ಮಿಗಳು ಕೊಲೆ ಮಾಡಿರುವ ಶಂಕೆ ವ್ಯಕ್ತವಾಗಿದೆ. ಕಲಬುರಗಿ ಸಬ್​ಅರ್ಬನ್ ಪೊಲೀಸ್​​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

 

 

 



 

Continue Reading
Click to comment

Leave a Reply

Your email address will not be published. Required fields are marked *

Advertisement