ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಊರಿನ ಸುದ್ದಿಗಳು ಕರ್ನಾಟಕ ಕಾನೂನು ಕ್ರೈಮ್ ನ್ಯೂಸ್ ಚರ್ಚೆಗಳು ಪ್ರಕಟಣೆ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಾಮಾನ್ಯ ಸ್ಥಳೀಯ
ನಗರಸಭಾ ವ್ಯಾಪ್ತಿಯಲ್ಲಿ ಕುಡಿಯುವ ನೀರಿನಸಮಸ್ಯೆ ಜಲಸಿರಿ ಅಧಿಕಾರಿಗಳ ಸಭೆ ಕರೆದ ಶಾಸಕರು ಸಮಸ್ಯೆಗಳಿಗೆ ಸ್ಪಂದಿಸದಂತೆ ಅಧಿಕಾರಿಗಳ ತಡೆ: ಸಾರ್ವತ್ರಿಕ ಆಕ್ರೋಶ, ನೀತಿ ಸಂಹಿತೆ: ಸಾರ್ವಜನಿಕರ ಸಮಸ್ಯೆಗೆ ಸ್ಪಂದಿಸುವಲ್ಲಿ ಅಧಿಕಾರಿಗಳ ಅಡ್ಡಿ- ಎರಡು ದಿನದಲ್ಲಿ ಕುಡಿಯುವ ನೀರು ಸಮಸ್ಯೆ ಪರಿಹಾರ ಮಾಡದಿದ್ದಲ್ಲಿ ಕಚೇರಿಯಲ್ಲಿ ಧರಣಿ ಕೂರುವೆ: ಶಾಸಕ ಅಶೋಕ್ ರೈಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ರಾಷ್ಟ್ರೀಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಅಂಬಿಕಾ ಕ್ಯಾಂಪಸ್ ತೆರಳುವ ಅಗಲೀಕರಣಗೊಂಡ ರಸ್ತೆ ಉದ್ಘಾಟನೆ ನಗರ ಬೆಳೆಯಬೇಕಾದರೆ ರಸ್ತೆಗಳು ಸಮರ್ಪಕವಾಗಿರಬೇಕು:ಅಶೋಕ್ ಕುಮಾರ್ ರೈಅಭಿಪ್ರಾಯ ಅಭಿವೃದ್ಧಿ ಕಾರ್ಯಗಳು ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಾಮಾನ್ಯ ಸ್ಥಳೀಯ
ಶಾಂತಿಮೊಗರು ಕಿಂಡಿ ಅಣೆಕಟ್ಟಿನಲ್ಲಿ ನೀರು ಸೋರಿಕೆ ತಡೆಯುವಂತೆ ಅಗ್ರಹಿಸಿ ಪ್ರತಿಭಟನೆ: ಒಂದು ವಾರದ ಸಮಯವಕಾಶ ಕೊಡಿ ಎಂದ ತಹಸೀಲ್ದಾರ್Published
1 year agoon
By
Akkare Newsನವದೆಹಲಿ: ತಮಿಳುನಾಡಿನಲ್ಲಿ ಉತ್ತಮ ಹಿಂಗಾರು ಮಳೆಯಾಗುತ್ತಿರುವ ಹಿನ್ನಲೆಯಲ್ಲಿ ಕಾವೇರಿ ನೀರು ನಿಯಂತ್ರಣ ಸಮಿತಿ ಕರ್ನಾಟಕಕ್ಕೆ ಕೊಂಚ ರಿಲೀಫ್ ನೀಡಿದ್ದು ಇಂತಿಷ್ಟೆ ನೀರು ಹರಿಸುವಂತೆ ಯಾವುದೇ ಸೂಚನೆ ನೀಡಿಲ್ಲ. ಇಂದು ಸಭೆ ನಡೆಸಿದ ಅಧ್ಯಕ್ಷ ವೀನಿತ್ ಗುಪ್ತಾ ನೈಸರ್ಗಿಕ ಹರಿವು ಕಡಿಮೆಯಾದಲ್ಲಿ ಮಾತ್ರ ಸುಪ್ರೀಂ ಕೋರ್ಟ್ ನಿಯಮದ ಅನ್ವಯ ನೀರು ಹರಿಸಲು ಸೂಚನೆ ನೀಡಿದ್ದಾರೆ.
ಸಭೆಯಲ್ಲಿ ಕರ್ನಾಟಕ ಬಾಕಿ ಉಳಿಸಿಕೊಂಡಿರುವ 11 TMC ಹಾಗೂ ಡಿಸೆಂಬರ್ ತಿಂಗಳ 6 TMC ಸೇರಿ ಒಟ್ಟು 17 TMC ನೀರು ಹರಿಸಬೇಕು ಎಂದು ತಮಿಳುನಾಡು ಪರ ಅಧಿಕಾರಿಗಳು ಮನವಿ ಮಾಡಿದರು. ಇದಕ್ಕೆ ಕರ್ನಾಟಕ ವಿರೋಧ ವ್ಯಕ್ತಪಡಿಸಿತು. ನವೆಂಬರ್ನಲ್ಲಿ 2,600 ಕ್ಯೂಸೆಕ್ ನೀರು ಹರಿಸುವಂತೆ ಸಮಿತಿ ಶಿಫಾರಸು ಮಾಡಿತ್ತು. ಆದ್ರೆ 2,600 ಕ್ಯೂಸೆಕ್ಗಿಂತ ಹೆಚ್ಚಿನ ನೀರು ಹರಿದು ಹೋಗಿದೆ.
ಜಲಾಶಯಗಳ ಕೆಳ ಪ್ರದೇಶದಲ್ಲಿ ಮಳೆ ಸುರಿಯುತ್ತಿರುವುದರಿಂದ ನಿಗದಿತ ಪ್ರಮಾಣಕ್ಕಿಂತ ನೀರು ನೈಸರ್ಗಿಕವಾಗಿ ಹರಿಯುತ್ತಿದೆ. ನಿತ್ಯ 3,000 ಕ್ಯೂಸೆಕ್ ನೀರು ನೈಸರ್ಗಿಕವಾಗಿ ಹರಿಯುತ್ತಿದೆ. ತಮಿಳುನಾಡಿನಲ್ಲೂ ಉತ್ತಮ ಹಿಂಗಾರು ಮಳೆಯಾಗುತ್ತಿದೆ. ಹೀಗಾಗಿ ಹೆಚ್ಚಿನ ನೀರು ಕೇಳಬಾರದು ಎಂದು ಆಕ್ಷೇಪ ವ್ಯಕ್ತಪಡಿಸಿತು.
ಎರಡೂ ಬದಿಯ ಮನವಿ ಆಲಿಸಿದ ಕಾವೇರಿ ನೀರು ನಿಯಂತ್ರಣ ಸಮಿತಿ ನವೆಂಬರ್ 23ರಿಂದ ಡಿಸೆಂಬರ್ 23ರ ವರಗೆ ನೀರು ಹರಿಸಿ, ನೈಸರ್ಗಿಕವಾಗಿ ಎಷ್ಟು ನೀರು ತಮಿಳುನಾಡು ಸೇರುತ್ತಿದೆ ಅದು ಸೇರಲಿ, ಕಾವೇರಿ ಅಚ್ಚುಕಟ್ಟು ಜಲಾಶಯಗಳಿಂದ ನೀರು ಹರಿಸುವ ಅಗತ್ಯ ಇಲ್ಲ, ಒಂದು ವೇಳೆ ನೈಸರ್ಗಿಕ ಹರಿವು ತಗ್ಗಿದ್ದಲ್ಲಿ ಮಾತ್ರ ಸುಪ್ರೀಂ ಕೋರ್ಟ್ ಆದೇಶದಂತೆ ನೀರು ಬಿಡಬೇಕು ಎಂದು ಶಿಫಾರಸು ಮಾಡಿತು. ಹೀಗಾಗಿ ಸದ್ಯ ಕರ್ನಾಟಕದ ಮೇಲೆ ಸದ್ಯ ಯಾವುದೇ ಒತ್ತಡಗಳು ಇಲ್ಲದಂತಾಗಿದ್ದು ನೈಸರ್ಗಿಕ ಹರಿವು ಕಡಿಮೆಯಾದಲ್ಲಿ ಮಾತ್ರ ಜಲಾಶಯಗಳಿಂದ ನಿತ್ಯ 2,700 ಕ್ಯೂಸೆಕ್ ನೀರು ಹರಿಸಬೇಕಿದೆ.