ನಮ್ಮೊಂದಿಗೆ ಸಂಪರ್ಕ ಸಾಧಿಸಿ

ದಕ್ಷಿಣ ಕನ್ನಡ

ಬಂಟ್ವಾಳ : ಮಕ್ಕಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್: ಪೋಷಕರ ಆಕ್ರೋಶ

Published

on

ಬಂಟ್ವಾಳ: ಪ್ರಾಥಮಿಕ ಶಾಲಾ ಮಕ್ಕಳ ಕೈಯಲ್ಲಿ ಕೊಡಲಿ ರೂಪದ ಪೆನ್ಸಿಲ್, ಮಾರಾಟ ಮಾಡುವ ವ್ಯಕ್ತಿಗಳ ವಿರುದ್ದ ಕ್ರಮಕೈಗೊಳ್ಳುವಂತೆ ಪೋಷಕರು ಒತ್ತಾಯ ಮಾಡಿದ್ದು, ಕೆದಿಲ ಗ್ರಾಮದ ಗಡಿಯಾರ ಪ್ರಾಥಮಿಕ ಶಾಲೆಯ ಮಕ್ಕಳ ಕೈಯಲ್ಲಿ ಈ ಪೆನ್ಸಿಲ್ ಕಂಡು ಬಂದಿದೆ. ಈ ವಿವಾದಾತ್ಮಕ ಪೆನ್ಸಿಲ್ ನ ಪೋಷಕರು ವಿರುದ್ದ ಕಿಡಿಕಾರಿದ್ದಾರೆ.

 

ಸಣ್ಣ ಮಕ್ಕಳ ಕೈಗೆ ಕೊಡಲಿ ರೂಪದ ಪೆನ್ಸಿಲ್ ನೀಡಿದರೆ ಅವರ ಭಾವನೆಗಳ ಮೇಲೆ ಪ್ರಭಾವ ಬೀರುವ ಬಗ್ಗೆ ತಿಳಿಯದ ಶಿಕ್ಷಕರ ವಿರುದ್ಧ ಪೋಷಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

 

ಇಂತಹ ವಿವಾದಾತ್ಮಕ ಮತ್ತು ಮಕ್ಕಳ ಮೇಲೆ ಕಟ್ಟ ಪರಿಣಾಮ ಬೀರುವ ವಸ್ತುಗಳ ಮಾರಾಟಕ್ಕೆ ಕ್ಷೇತ್ರ ಶಿಕ್ಷಣಾಧಿಕಾರಿಗಳು ಅವಕಾಶ ನೀಡಬಾರದು ಎಂಬುದು ಪೋಷಕರು ಒತ್ತಾಯ ಮಾಡಿದ್ದಾರೆ.

 

 

ಈ ಮಾರಾಟಗಾರರು ತಾಲೂಕಿನ ವಿವಿಧ ಶಾಲೆಗಳಿಗೆ ಭೇಟಿ ನೀಡಿ ಇದೇ ರೀತಿಯ ಪೆನ್ಸಿಲ್ ಗಳನ್ನು ಮಾರಾಟ ಮಾಡಿದ್ದವರ ಮೇಲೆ ಕ್ರಮ ಜರುಗಿಸುವಂತೆ ಒತ್ತಾಯ ಕೇಳಿಬಂದಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement