Published
10 months agoon
By
Akkare News
ಚಿನ್ನಸ್ವಾಮಿ ಸ್ಟೇಡಿಯಂ ಬಳಿ ಸಂಭವಿಸಿದ್ದ ಕಾಲ್ತುಳಿತ ಪ್ರಕರಣದಲ್ಲಿ ರಾಜ್ಯ ಸರ್ಕಾರ ಪೊಲೀಸ್ ಅಧಿಕಾರಿಗಳನ್ನು ಹೊಣೆ ಮಾಡಿ ಅವರನ್ನು ಅಮಾನತು ಮಾಡಿತ್ತು. ಆದ್ರೆ, ಇದೀಗ ರಾಜ್ಯ ಸರ್ಕಾರವೇ ಯುಟರ್ನ್ ಹೊಡೆದಿದ್ದು, ತಾನೇ ಪೊಲೀಸ್ ಅಧಿಕಾರಿಗಳ ಅಮಾನತು ರದ್ದುಗೊಳಿಸಿ ಆದೇಶ ಹೊರಡಿಸಿದೆ.





ಚಿನ್ನಸ್ವಾಮಿ ಕ್ರೀಡಾಂಗಣ ಕಾಲ್ತುಳಿತ ದುರಂತಕ್ಕೆ ಪೊಲೀಸ್ ಅಧಿಕಾರಿಗಳ ನಿರ್ಲಕ್ಷ್ಯವೇ ಕಾರಣ ಎಂದು ಹೇಳಿತ್ತು. ಪೊಲೀಸ್ ಕಮಿಷನರ್ ಬಿ.ದಯಾನಂದ್, ಡಿಸಿಪಿ ಶೇಖರ್ ಹೆಚ್.ಟಿ., ಕಬ್ಬನ್ ಪಾರ್ಕ್ ಪೊಲೀಸ್ ಠಾಣೆ ASI ಬಾಲಕೃಷ್ಣ ಹಾಗೂ ಇನ್ಸ್ಪೆಕ್ಟರ್ ಗಿರೀಶ್ ಅವರನ್ನು ಅಮಾನತು ಮಾಡಿ ಆದೇಶ ಹೊರಡಿಸಿತ್ತು. ಆದ್ರೆ, ಇದೀಗ ಪೊಲಿಸ್ ಅಧಿಕಾರಿಗಳ ಅಮಾನತು ಆದೇಶವನ್ನು ವಾಪಸ್ ಪಡೆದುಕೊಂಡಿದೆ.









