Published
10 months agoon
By
Akkare News
ರಾಜ್ಯದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ತಾಲೂಕು ಪಂಚಾಯತ್ ಚುನಾವಣೆಗೆ ಇನ್ನು ಎರಡು ತಿಂಗಳಲ್ಲಿ ನೋಟಿಫಿಕೇಶನ್ ಹೊರಡಿಸಲಾಗುವುದು ಎಂದು ಗ್ರಾಮೀಣಾಭಿವೃದ್ದಿ ಸಚಿವ ಪ್ರಿಯಾಂಕ್ ಖರ್ಗೆ ಹೇಳಿದ್ದಾರೆ.


ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್ ಚುನಾವಣೆಗೆ ಸಂಬಂಧಿಸಿದಂತೆ ಮೀಸಲಾತಿ ಪ್ರಕ್ರಿಯೆ ನಡೆಯುತ್ತಿದ್ದು, ಎರಡು-ಮೂರು ತಿಂಗಳಲ್ಲಿ ಚುನಾವಣೆಗೆ ನೋಟಿಫಿಕೇಶನ್ ಹೊರಡಿಸಲಾಗುವುದು. ಬಿಜೆಪಿ ಅಧಿಕಾರದಲ್ಲಿದ್ದಾಗ ಜಿ.ಪಂ. ಮತ್ತು ತಾ.ಪಂ. ಚುನಾವಣೆಯನ್ನು ಮುಂದೂಡುತ್ತಲೆ ಬಂದಿದೆ. ಆದರೆ, ಈ ಬಾರಿ ನಾವು ಚುನಾವಣೆ ನಡೆಸುವುದು ಖಚಿತ ಎಂದರು. ಇತ್ತೀಚೆಗೆ ಮಾನ್ಯ ಕರ್ನಾಟಕ ಹೈಕೋರ್ಟ್ ಈ ಬಗ್ಗೆ ಎಚ್ಚರಿಕೆಯನ್ನು ನೀಡಿತ್ತು.














