Published
7 months agoon
By
Akkare News
ದೆಹಲಿ (ಆ.16): ನನ್ನ ಹೆಂಡತಿಯನ್ನು ಈ ಸ್ವಾಮೀಜಿ ತನ್ನ ಕಡೆಗೆ ವಶೀಕರಣ ಮಾಡಿಕೊಂಡು, ನನಗೆ ಡಿವೋರ್ಸ್ ಕೊಡುವಂತೆ ಮಾಡಿದ್ದಾನೆ. ತನ್ನ ಕುಟುಂಬ ಹಾಳಾಗಲು ಈ ಸ್ವಯಂ ಘೋಷಿತ ದೇವಮಾನವನೇ ಕಾರಣವೆಂದು ಆತನನ್ನು ಕಿಡ್ನಾಪ್ ಮಾಡಿ ಕೊಲೆ ಮಾಡಿದ ಘಟನೆ ನಡೆದಿದೆ.
ಈ ಘಟನೆ ನೋಯ್ಡಾದಲ್ಲಿ ನಡೆದಿದೆ. ಪೊಲೀಸರು ಹೆದ್ದಾರಿ ಬಳಿ ನಿಂತುಕೊಂಡಿದ್ದಾಗ ಅತಿವೇಗದಲ್ಲಿ ಬಂದ ಸ್ವಿಫ್ಟ್ ಡಿಸೈರ್ ಕಾರನ್ನು ಪೊಲೀಸರು ನಿಲ್ಲಿಸಲು ಹೇಳಿದ್ದಾರೆ. ಆದರೆ, ತುಂಬಾ ವೇಗವಾಗಿ ಹೋಗುತ್ತಿದ್ದ ಕಾರನ್ನು ಪೊಲೀಸರು ಬೆನ್ನಟ್ಟಿಕೊಂಡು ಹೋಗಿ ನಿರ್ಜನ ಪ್ರದೇಶದಲ್ಲಿ ಕಾರಿನಲ್ಲಿದ್ದವರ ಮೇಲೆ ಗುಂಡು ಹಾರಿಸಿ ನಿಲ್ಲಿಸಿದ್ದಾರೆ. ನಂತರ ಕಾರನ್ನು ತೆಗೆದು ಪರಿಶೀಲನೆ ನಡೆಸಿದಾಗ ಕಾರಿನಲ್ಲಿ ಕೇಸರಿ ಬಟ್ಟೆ ಮತ್ತು ಆಯುಧಗಳು ಪತ್ತೆಯಾಗಿವೆ. ಇದನ್ನು ಆಧರಿಸಿ ಸ್ವಯಂಘೋಷಿತ ದೇವಮಾನವನ ಕೊಲೆ ಪ್ರಕರಣದಲ್ಲಿ ಕಾರಿನಲ್ಲಿದ್ದ 5 ಜನ ಆರೋಪಿಗಳನ್ನು ಬಂಧಿಸಲಾಗಿದೆ.


ಇದೀಗ ಕೊಲೆಯಾಗಿರುವ ದೇವಮಾನವ ನರೇಶ್ ಪ್ರಜಾಪತಿ (40 ವರ್ಷ) ತನ್ನ ಹೆಂಡತಿಯನ್ನು ವಶೀಕರಣ ಮಾಡಿಕೊಂಡು (ಹಿಪ್ನೋಟೈಸ್) ತನ್ನ ವಶಕ್ಕೆ ತೆಗೆದುಕೊಂಡಿದ್ದಾನೆ. ಈ ಮಾಂತ್ರಿಕನೇ ವಿಚ್ಛೇದನಕ್ಕೆ ಕಾರಣ ಎಂದು ಆರೋಪಿಸಿ ಯುವಕ ಹಾಗೂ ಆತನ ಸ್ನೇಹಿತರು ಸೇರಿಕೊಂಡು ಕೊಲೆ ಮಾಡಿದ್ದಾರೆ. ಮಾಂತ್ರಿಕ ನರೇಶ್ ರೋಜಾ ಜಲಾಲ್ಪುರದ ನಿವಾಸಿ ಆಗಿದ್ದನು. ಈತನನ್ನು ನೀರಜ್, ಸುನಿಲ್, ಸೌರಭ್ ಕುಮಾರ್, ಪ್ರವೀಣ್ ಶರ್ಮಾ ಮತ್ತು ಪ್ರವೀಣ್ ಮಾವಿ ಎನ್ನುವವರು ಕೊಲೆ ಮಾಡಿದ್ದು, ಇದೀಗ ಪೊಲೀಸರ ಬಂಧನದಲ್ಲಿದ್ದಾರೆ. ಈ ಘಟನೆ ಆಗಸ್ಟ್ 2 ರಂದು ನಡೆದಿತ್ತು. ಸ್ವಾಮೀಜಿಯನ್ನು ಕತ್ತು ಹಿಸುಕಿ ಕೊಲೆ ಮಾಡಿ, ಬುಲಂದ್ಶಹರ್ನ ಕಾಲುವೆಯೊಂದರಲ್ಲಿ ಶವವನ್ನು ಎಸೆಯಲಾಗಿತ್ತು. ಪ್ರವೀಣ್ ಶರ್ಮಾ ಪ್ರಮುಖ ಆರೋಪಿ. ಇವನೇ ತನ್ನ ಹೆಂಡತಿ ಡಿವೋರ್ಸ್ ನೀಡಿದ್ದಕ್ಕೆ ಸ್ವಾಮೀಜಿ ಕಾರಣವೆಂದು ಕೊಲೆಗೆ ಸಂಚು ರೂಪಿಸಿದ್ದನು.



‘







