Published
11 months agoon
By
Akkare News
ಮಂಗಳೂರು: ದಕ್ಷಿಣ ಕನ್ನಡಾದ್ಯಂತ ವ್ಯಾಪಕ ಮಳೆಆಗುತ್ತಿರುವುದರಿಂದ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢಶಾಲೆ, ಪದವಿಪೂರ್ವ ಕಾಲೇಜು ಸರ್ಕಾರಿ, ಅನುದಾನಿತ, ಖಾಸಗಿ ಶಿಕ್ಷಣ ಸಂಸ್ಥೆಗಳಿಗೆ ಆ.30ರಂದು ರಜೆ ಘೋಷಿಸಿ ಜಿಲ್ಲಾಧಿಕಾರಿ ದರ್ಶನ್ ಎಚ್.ವಿ ಆದೇಶ ಹೊರಡಿಸಿದ್ದಾರೆ.


ಭಾರತೀಯ ಹವಾಮಾನ ಇಲಾಖೆ ಮತ್ತು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರ ಹೊರಡಿಸಿದ ಮುನ್ಸೂಚನೆಯಂತೆ, ಜಿಲ್ಲೆಯಾದ್ಯಂತ ರೆಡ್ ಅಲರ್ಟ್ ಘೋಷಣೆಯಾಗಿದೆ. ಮೀನುಗಾರರು ಸಮುದ್ರಕ್ಕೆ ಇಳಿಯಬಾರದು, ಪ್ರವಾಸಿಗರು, ಸಾರ್ವಜನಿಕರು ನದಿತೀರಕ್ಕೆ ಸಮುದ್ರ ತೀರಕ್ಕೆ ತೆರಳಬಾರದು ಎಂದು ಅವರು ತಿಳಿಸಿದ್ದಾರೆ.












