Published
6 months agoon
By
Akkare News
ಉಡುಪಿ: ಕೊಲ್ಲೂರಿನಲ್ಲಿ ಸೌಪರ್ಣಿಕಾ ನದಿಗೆ ಈಜಲು ಇಳಿದು ನಾಪತ್ತೆಯಾಗಿದ್ದ ಬೆಂಗಳೂರಿನ ಮಹಿಳೆಯ ಶವ ಶನಿವಾರ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಅವರನ್ನು ಬೆಂಗಳೂರು ತ್ಯಾಗರಾಜನಗರ ನಿವಾಸಿ ಸಿ.ಆರ್.ಗೋವಿಂದರಾಜು-ವಿಮಲಾ ಎಂಬವರ ಪುತ್ರಿ ವಸುಧಾ ಚಕ್ರವರ್ತಿ (46) ಎಂದು ಗುರುತಿಸಲಾಗಿದೆ.



ಆ. 27ರಂದು ಕೊಲ್ಲೂರಿಗೆ ಕಾರಿನಲ್ಲಿ ಬಂದಿದ್ದ ಅವರು ನಂತರ ಕಾಣೆಯಾಗಿದ್ದರು. ಪೊಲೀಸರು ಅಗ್ನಿಶಾಮಕ ದಳ ಮತ್ತು ಮುಳುಗು ತಜ್ಞ ಈಶ್ವರ್ ಮಲ್ಪೆ ತಂಡ 2 ದಿನ ನದಿಯಲ್ಲಿ ಹುಡುಕಾಡಿದ್ದರು. ಆದರೆ ನದಿಯಲ್ಲಿ ಮಳೆಯ ನೀರು ತುಂಬಿ ಹರಿಯುತ್ತಿದ್ದರಿಂದ ಹುಡುಕಾಟ ಫಲಪ್ರದವಾಗಿರಲಿಲ್ಲ. ಶನಿವಾರ ಮಧ್ಯಾಹ್ನ 3 ಗಂಟೆಗೆ ಕೊಲ್ಲೂರಿನಿಂದ ಸುಮಾರು 3 ಕಿ.ಮೀ. ದೂರದ ಮಾವಿನಕೆರೆ ಎಂಬಲ್ಲಿ ನದಿಯಲ್ಲಿ ಗಿಡಮರಗಳಿಗೆ ಸಿಲುಕಿದ್ದ ಕೊಳೆತ ಶವ ಪತ್ತೆಯಾಗಿದೆ.











