Published
1 year agoon
By
Akkare Newsಪುತ್ತೂರು: ಪುತ್ತೂರು ಶ್ರೀ ರಾಮಕೃಷ್ಣ ಪ್ರೌಢಶಾಲೆಯ ನೇತೃತ್ವದಲ್ಲಿ ಕೊಂಬೆಟ್ಟಿನಲ್ಲಿರುವ ತಾಲೂಕು ಕ್ರೀಡಾಂಗಣದಲ್ಲಿ ನಡೆದ ರಾಜ್ಯಮಟ್ಟದ 17ರ ವಯೋಮಾನದ ಪ್ರೌಢಶಾಲಾ ಬಾಲಕ ಮತ್ತು ಬಾಲಕಿಯರ ಕ್ರೀಡಾಕೂಟದಲ್ಲಿ ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ಪಡೆದುಕೊಂಡಿದೆ.
ಬಾಲಕರ ವಿಭಾಗದಲ್ಲಿ ಬೆಂಗಳೂರು ವಿದ್ಯಾನಗರ ಸ್ಪೋರ್ಟ್ ಶಾಲೆ ಪ್ರಥಮ, ದಕ್ಷಿಣ ಕನ್ನಡ ದ್ವಿತೀಯ, ಬಾಲಕಿಯರ ವಿಭಾಗದಲ್ಲಿ ದಕ್ಷಿಣ ಕನ್ನಡ ಪ್ರಥಮ, ಶಿರಸ್ಸಿ ದ್ವಿತೀಯ ಸ್ಥಾನ ಪಡೆದು ದಕ್ಷಿಣ ಕನ್ನಡ ಜಿಲ್ಲೆ ಸಮಗ್ರ ಪ್ರಶಸ್ತಿ ತನ್ನದಾಗಿಸಿಕೊಂಡಿದೆ.