Published
1 year agoon
By
Akkare Newsತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ವಾಯುಪಡೆಯ ತರಬೇತಿ ವಿಮಾನ ಪತನಗೊಂಡಿದೆ. ಈ ದುರ್ಘಟನೆಯಲ್ಲಿ ಇಬ್ಬರು ಪೈಲಟ್‌ಗಳು ಸಾವನ್ನಪ್ಪಿದ್ದಾರೆ.ಘಟನೆಯ ಬಗ್ಗೆ ಭಾರತೀಯ ವಾಯುಪಡೆ ಮಾಹಿತಿ ನೀಡಿದ್ದು ಬೆಳಗ್ಗೆ 8.55ಕ್ಕೆ ಈ ಅವಘಡ ಸಂಭವಿಸಿದೆ. ಇಂದು ಬೆಳಗ್ಗೆ ಪಿಸಿ 7 ಎಂಕೆ II ವಿಮಾನವು ವಾಡಿಕೆಯ ತರಬೇತಿ ವೇಳೆ ಅಪಘಾತಕ್ಕೀಡಾಗಿದೆ ಎಂದು ವಾಯುಪಡೆ ತಿಳಿಸಿದೆ. ವಿಮಾನದಲ್ಲಿದ್ದ ಇಬ್ಬರೂ ಪೈಲೆಟ್ ಗಳು ಗಂಭೀರವಾಗಿ ಗಾಯಗೊಂಡಿದ್ದು, ನಂತರ ಮೃತಪಟ್ಟಿದ್ದಾರೆ.
ದಿಂಡುಗಲ್‌ನ ಏರ್ ಫೋರ್ಸ್ ಅಕಾಡೆಮಿ ತರಬೇತಿ ವೇಳೆ ಈ ಅವಘಡ ಸಂಭವಿಸಿದೆ. ಸತ್ತವರಲ್ಲಿ ಒಬ್ಬ ಇನ್ಸ್ಟ್ರಕ್ಟರ್ ಮತ್ತು ಕೆಡೆಟ್ ಸೇರಿದ್ದಾರೆ. ಪೊಲೀಸರ ಪ್ರಕಾರ, ತೆಲಂಗಾಣದ ಮೇದಕ್ ಜಿಲ್ಲೆಯಲ್ಲಿ ಈ ಅಪಘಾತ ಸಂಭವಿಸಿದೆ. ವಿಮಾನದಲ್ಲಿ ಇಬ್ಬರು ಭಾರತೀಯ ವಾಯುಪಡೆ ಅಧಿಕಾರಿಗಳು ಇದ್ದರು. ಈ ಅಪಘಾತ ಸಂಭವಿಸಿದಾಗ ವಿಮಾನ ತೂಪ್ರಾನ್ ಪ್ರದೇಶದಲ್ಲಿತ್ತು. ಏರ್ ಫೋರ್ಸ್ ಅಕಾಡೆಮಿ ದುಂಡಿಗಲ್‌ನಿಂದ ವಿಮಾನ ಟೇಕಾಫ್ ಆಗಿತ್ತು ಗುಡ್ಡಗಾಡು ಪ್ರದೇಶದಲ್ಲಿ ವಾಯುಪಡೆ ವಿಮಾನ ಪತನವಾಗುತ್ತಲೇ ಸುತ್ತಮುತ್ತಲಿನ ಗ್ರಾಮಸ್ಥರು ಸ್ಥಳಕ್ಕೆ ಆಗಮಿಸಿದ್ದಾರೆ. ಬಳಿಕ ಪೊಲೀಸರು ಹಾಗೂ ಅಗ್ನಿಶಾಮಕ ಸಿಬ್ಬಂದಿಗೆ ಮಾಹಿತಿ ನೀಡಲಾಗಿದೆ.
ಘಟನೆ ಸಂಬಂಧ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರು ಪೈಲಟ್‌ಗಳ ಸಾವಿಗೆ ಸಂತಾಪ ಸೂಚಿಸಿದ್ದಾರೆ ಇಬ್ಬರು ಪೈಲಟ್‌ಗಳು ಪ್ರಾಣ ಕಳೆದುಕೊಂಡಿರುವುದು ಬೇಸರ ತಂದಿದೆ ಎಂದಿದ್ದಾರೆ.