Published
5 months agoon
By
Akkare News
ಕರ್ನಾಟಕದಲ್ಲಿ ಮುಂದಿನ 3-4ದಿನ ವ್ಯಾಪಕ ಮಳೆ ಬೀಳಲಿದ್ದು, 9 ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ವರುಣ ಅಬ್ಬರಿಸಲಿದ್ದಾನೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕಳೆದ 2 ದಿನಗಳಿಂದ ಮತ್ತೆ ಮಳೆಯಾಗುತ್ತಿದ್ದು, “ಶಕ್ತಿ” ಚಂಡಮಾರುತದ ಪರಿಣಾಮ ಅ.11ರವರೆಗೂ ಮಳೆ ಮುಂದುವರಿಯಲಿದೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಎಲ್ಲೆಲ್ಲಿ ಮಳೆ..?
ಬೀದರ್, ಕಲಬುರಗಿ, ಯಾದಗಿರಿ, ಚಾಮರಾಜನಗರ, ಚಿಕ್ಕಮಗಳೂರು, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ರಾಜ್ಯದ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮೋಡ ಕವಿದ ವಾತಾವರಣ ಇರಲಿದೆ. ವಿಶೇಷ ಎಂಬಂತೆ ಬಿಸಿಲು ಸಹ ಹೆಚ್ಚಾಗಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ರಾಜಧಾನಿ ಬೆಂಗಳೂರಲ್ಲೂ ಮಳೆ ಸುರಿಯಲಿದೆ.ಅಕ್ಟೋಬರ್ 11ರ ವರೆಗೆ ಬೆಂಗಳೂರಿನಲ್ಲಿ ಮಳೆಯಾಗಲಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಬೆಂಗಳೂರಿನಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಎಚ್ಚರಿಸಿದೆ

ವಾರಪೂರ್ತಿ ಮಳೆ ಸಂಭವ..!
ಅ-11 ರವರೆಗೂ ರಾಜ್ಯದ ಹಲವೆಡೆ ಮಳೆ ಬೀಳಲಿದೆ.
ದಕ್ಷಿಣ ಕನ್ನಡ, ಉತ್ತರ ಕನ್ನಡ, ಉಡುಪಿ, ಬೆಳಗಾವಿ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರುಗಿ, ಕೊಪ್ಪಳ, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಾಮರಾಜನಗರದಲ್ಲಿ ಉತ್ತಮ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಇತ್ತ ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಭಾಗದಲ್ಲೂ ಸಾಧಾರಣ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ರೈತರಲ್ಲಿ ಆತಂಕ..!
ಇನ್ನು, ಅವಧಿಗೆ ಮೀರಿ ಮಳೆ ಹಾಗೂ ಚಂಡಮಾರುತದ ಎಫೆಕ್ಟ್ ನಿಂದ ರೈತಾಪಿವರ್ಗ ಕಂಗಾಲಾಗಿದೆ. ಅನ್ನದಾತರ ಬೆಳೆಗಳಿಗೆ ಹಾನಿಯಾಗಿದ್ದು, ರೈತರು ನಷ್ಟ ಅನುಭವಿಸಿದ್ದಾರೆ. ಕಷ್ಟಪಟ್ಟು ಬೆಳೆದ ಬೆಳೆಗಳು ಸಂಪೂರ್ಣ ನೀರುಪಾಲಾಗಿದೆ.


