Published
1 year agoon
By
Akkare Newsಜಮ್ಮು-ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಟದಲ್ಲಿ ಹುತಾತ್ಮರಾದ ಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಕುಟುಂಬಕ್ಕೆ 50,00,000 ಪರಿಹಾರ ಧನವನ್ನು ಮಂಜೂರು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ. ಈ ವಿಷಯವನ್ನು ಅವರು ಎಕ್ಸ್ ಖಾತೆಯಲ್ಲಿ ಘೋಷಣೆ ಮಾಡಿದ್ದಾರೆ.
ಪರಿಹಾರ ಧನದ ಚೆಕ್‌ಅನ್ನು ಸಿದ್ಧಪಡಿಸಲಾಗಿದ್ದು ನಾಳೆ (ನ.5) ಯೋಧನ ಕುಟುಂಬಕ್ಕೆ ನೀಡಲಾಗುವುದು. ಕ್ಯಾಪ್ಟನ್ ಪ್ರಾಂಜಲ್ ಅವರ ದೇಶಸೇವೆ, ಸಮರ್ಪಣಾಭಾವನ್ನು ಗೌರವದಿಂದ ಸ್ಮರಿಸುತ್ತಾ, ಗೌರವ ನಮನ ಸಲ್ಲಿಸುತ್ತೇನೆ ಎಂದು ಮುಖ್ಯಮಂತ್ರಿ ಅವರು ನಿನ್ನೆ ತಮ್ಮ ಎಕ್ಸ್ ಪೋಸ್ಟ್ ನಲ್ಲಿ ತಿಳಿಸಿದ್ದಾರೆ.
ಹುತಾತ್ಮರಾದ ಕ್ಯಾಪ್ಟನ್ ಎಂವಿ ಪ್ರಾಂಜಲ್ ಅವರ ಹೆಸರನ್ನು ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನೀಡಿದ ಸಂದರ್ಶನವೊಂದರಲ್ಲಿ ಮರೆತ ಹಾಗೆ ಮಾತನಾಡಿದ್ದರು. ಕ್ಯಾಪ್ಟನ್ ಪ್ರಾಂಜಲ್ ಕುಟುಂಬಕ್ಕೆ ಪರಿಹಾರದ ಕಾಲಮಿತಿ ಕುರಿತು ಪತ್ರಕರ್ತರು ಕೇಳಿದಾಗ, ಯಾರು, ಯಾವಗ ಘೋಷಣೆ ಮಾಡಿದರು ಎಂದು ಸಿದ್ದರಾಮಯ್ಯ ಉಡಾಫೆಯಾಗಿ ಪ್ರಶ್ನೆ ಮಾಡಿದರು. ಇದಕ್ಕೆ ಬಿಜೆಪಿ ಸೇರಿ ಸಾಮಾಜಿಕ ಜಾಲತಾಣದಲ್ಲಿ ಭಾರೀ ಟೀಕೆ ವ್ಯಕ್ತವಾಗಿದ್ದವು. ಇದೀಗ ಆ ಟ್ರೋಲ್ ಗೆ ತೆರೆ ಬಿದ್ದಿದೆ.