Published
1 year agoon
By
Akkare Newsಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಉಪ ಮುಖ್ಯಮಂತ್ರಿ ಡಿಕೆ ಶಿವಕುಮಾರ್ ವಿರುದ್ಧ ಸಿಬಿಐ ತನಿಖೆಗೆ ಬಿಜೆಪಿ ಸರ್ಕಾರ ನೀಡಿದ್ದ ಅನುಮತಿಯನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಹಿಂಪಡೆದಿತ್ತು. ಸರ್ಕಾರದ ಈ ಕ್ರಮ ಪ್ರಶ್ನಿಸಿ ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ನ್ಯಾಯಾಲಯದಲ್ಲಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ ಹೂಡಿರುವ ಯತ್ನಾಳ್, ಒಪ್ಪಿಗೆ ಹಿಂಪಡೆದ ರಾಜ್ಯ ಸರ್ಕಾರದ ಆದೇಶ ರದ್ದುಪಡಿಸುವಂತೆ ಕೋರಿದ್ದಾರೆ.
ಶಾಸಕ ಯತ್ನಾಳ್ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಕೆ ವೇಳೆ, ಒಮ್ಮೆ ಸಿಬಿಐ ತನಿಖೆಗೆ ನೀಡಿದ ಒಪ್ಪಿಗೆ ಹಿಂಪಡೆಯುವಂತಿಲ್ಲ ಎಂದು ಕಾಜಿ ಲೆಂಡಪ್ ದೋರ್ಜಿ ಪ್ರಕರಣದ ತೀರ್ಪನ್ನು ಉಲ್ಲೇಖಿಸಿದ್ದಾರೆ ಎಂದು ತಿಳಿದು ಬಂದಿದೆ. ಸಿಬಿಐ ತನಿಖೆ ಬಹುತೇಕ ಮುಕ್ತಾಯದ ಹಂತದಲ್ಲಿದೆ. ಸರ್ಕಾರ ಕಾನೂನುಬಾಹಿರ ಕ್ರಮ ಕೈಗೊಂಡಿದೆ. ಸಿಬಿಐ ತನಿಖೆಯನ್ನು ಮೊಟಕುಗೊಳಿಸುವ ಉದ್ದೇಶ ಸರ್ಕಾರ ಹೊಂದಿದೆ ಎಂದು ಯತ್ನಾಳ್ ಆರೋಪಿಸಿದ್ದಾರೆ