Published
1 year agoon
By
Akkare Newsಪುತ್ತೂರು: ಹವಾಮಾನ ಆಧಾರಿತ ಬೆಳೆ ವಿಮೆ ಸರಕಾರದಿಂದ ಇನ್ನೂ ಬಿಡುಗಡೆಯಾಗದ ಬಗ್ಗೆ ರಾಜ್ಯ ತೋಟಗಾರಿಕಾ ಸಚಿವರ ಜೊತೆ ಮಾತುಕತೆ ನಡೆಸಿದ ಪುತ್ತೂರು ಶಾಸಕ ಅಶೋಕ್ ರೈ ಬೆಳೆ ವಿಮೆಯನ್ನು ಶೀಘ್ರವೇ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದರು. ಈ ಬಗ್ಗೆ ಶಾಸಕರಿಗೆ ಭರವಸೆ ನೀಡಿದ ಸಚಿವರು ಮುಂದಿನ ವಾರ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗೆ ವಿಮಾ ಮೊತ್ತ ಬಿಡುಗಡೆ ಮಾಡಲಾಗುವುದು ಎಂದು ಶಾಸಕರಲ್ಲಿ ತಿಳಿಸಿದ್ದಾರೆ.
ಉಭಯ ಜಿಲ್ಲೆಯ ರೈತರು ಯಾವುದೇ ಆತಂಕ ಪಡಬೇಕಾದ ಅವಶ್ಯಕತೆಯಿಲ್ಲ ಬೆಳೆ ವಿಮಾ ಮೊತ್ತವನ್ನು ಮುಂದಿನ ವಾರ ಎಲ್ಲಾ ಫಲಾನುಭವಿ ಕೃಷಿಕರಿಗೆ ದೊರೆಯಲಿದೆ ಎಂದು ಶಾಸಕ ಅಶೋಕ್ ರೈ ತಿಳಿಸಿದ್ದಾರೆ.