Published
1 year agoon
By
Akkare Newsಸ್ಯಾಂಡಲ್‌ವುಡ್‌ನ ಹಿರಿಯ ನಟಿ ಲೀಲಾವತಿ ಅನಾರೋಗ್ಯದಿಂದ ಹಾಸಿಗೆ ಹಿಡಿದಿದ್ದರು. ಇಂದು (ಡಿಸೆಂಬರ್ 8) ರಂದು ಹಿರಿಯ ನಟಿ ಲೀಲಾವತಿ ಅವರ ಆರೋಗ್ಯದಲ್ಲಿ ಏರುಪೇರು ಕಂಡು ಬಂದ ಹಿನ್ನೆಲೆ ತಕ್ಷಣವೇ ಅವರನ್ನು ನೆಲಮಂಗಲದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೇ ಲೀಲಾವತಿ ಅವರು ವಿಧಿವಶರಾಗಿದ್ದಾರೆ.
ಕನ್ನಡ ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಆರೋಗ್ಯ ದಿನದಿಂದ ದಿನಕ್ಕೆ ಕೈ ಕೊಡುತ್ತಿದ್ದ ಹಿನ್ನೆಲೆ ಆರೋಗ್ಯ ಕ್ಷೀಣಿಸಿತ್ತು. ವಯೋಸಹಜ ಸಮಸ್ಯೆಗಳಿಂದ ಬಳಲುತ್ತಾ ಸಂಪೂರ್ಣವಾಗಿ ಹಾಸಿಗೆ ಹಿಡಿದಿದ್ದ ಲೀಲಾವತಿ ಅವರು ಇತ್ತೀಚೆಗೆ ಕೇವಲ ನೀರು ಮಾತ್ರ ಸೇವನೆ ಮಾಡುತ್ತಿದ್ದರು. ಅಷ್ಟೇ ಅಲ್ಲದೆ, ಅವರಿಗೆ ಮಾತನಾಡಲಾಗದ ಸ್ಥಿತಿ ನಿರ್ಮಾಣವಾಗಿತ್ತು. ಇದೀಗ, ಚಿತ್ರರಂಗದ ಹಿರಿಯ ನಟಿ ಲೀಲಾವತಿ ಅವರ ಸ್ಥಿತಿ ಗಂಭೀರವಾಗಿ ಆಸ್ಪತ್ರೆಗೆ ದಾಖಲಿಸಿದರು ಚಿಕಿತ್ಸೆ ಫಲಕಾರಿಯಾಗದೆ ಕಾಲದ ಕರೆಗೆ ಓಗೊಟ್ಟು ಇಹಲೋಕದ ಯಾತ್ರೆ ಮುಗಿಸಿದ್ದಾರೆ.
ನೆಲಮಂಗಲದ ಬಳಿ ಇರುವ ಸೋಲದೇವನಹಳ್ಳಿಯ ಲೀಲಾವತಿ ಅವರ ನಿವಾಸಕ್ಕೆ ಇತ್ತೀಚೆಗೆ ಅರ್ಜುನ್ ಸರ್ಜಾ, ದರ್ಶನ್, ಡಿಕೆಶಿ, ಶಿವಣ್ಣ ದಂಪತಿಗಳು ಜೊತೆಗೆ ಅನೇಕರು ಭೇಟಿ ನೀಡಿದ್ದರು. ಇದೀಗ ನಟಿಯ ಅಗಲಿಕೆಗೆ ಅಭಿಮಾನಿಗಳು, ಚಿತ್ರರಂಗದ ಮೇರು ನಟರು, ಕಲಾವಿದರು ಸಂತಾಪ ಸೂಚಿಸಿದ್ದಾರೆ.ನೆಲಮಂಗಲದಲ್ಲಿರುವ ಅವರ ತೋಟದ ಮನೆಯಲ್ಲೇ ಅಂತ್ಯಕ್ರಿಯೆಯನ್ನು ನೇರವೇರಿಸಲಾಗುತ್ತದೆ ಎನ್ನಲಾಗಿದೆ. ಇಂದು ರಾತ್ರಿ ಅವರ ಪಾರ್ಥೀವ ಶರೀರವವನ್ನು ಸಾರ್ವಜನಿಕ ದರ್ಶನಕ್ಕೆ ಇಡಲಾಗುತ್ತದೆ. ಇದಾದ ಬಳಿಕ ಅವರ ಅಂತ್ಯಕ್ರಿಯೆಯನ್ನು ನೇರವೇರಸಲಾಗುತ್ತದೆ ಎಂದು ತಿಳಿದು ಬಂದಿದೆ.