Connect with us

ಕ್ರೈಮ್ ನ್ಯೂಸ್

ಚಿಕ್ಕಮಂಗಳೂರು : ಗುಂಪು ಘರ್ಷಣೆ ಗ್ರಾಮ ಪಂಚಾಯಿತಿ ಸದಸ್ಯನ ಬರ್ಬರ ಹತ್ಯೆ

Published

on

ಚಿಕ್ಕಮಗಳೂರು : 2 ಗುಂಪುಗಳ ಮಧ್ಯೆ ನಡೆದ ಮಾರಾಮಾರಿಯಲ್ಲಿ ಕಾಂಗ್ರೆಸ್ ಗ್ರಾಮ ಪಂಚಾಯತ್  ಸದಸ್ಯನನ್ನ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಕಡೂರು ತಾಲೂಕಿನ ಸಖರಾಯಪಟ್ಟಣದಲ್ಲಿ  ಶುಕ್ರವಾರ ರಾತ್ರಿ ನಡೆದಿದೆ.

ಕಾಂಗ್ರೆಸ್ ಗ್ರಾಪಂ ಸದಸ್ಯನ ಗಣೇಶ್ (38) ಹತ್ಯೆಗೀಡಾಗಿದ್ದು,ಗಲಾಟೆ ನಡೆಸಿದ ಗುಂಪು  ಮಚ್ಚಿನಿಂದ ಕೊಚ್ಚಿ ಕೊಲೆಗೈದಿದ್ದಾರೆ.

 

ರಾತ್ರಿ 10.30ರ ವೇಳೆಗೆ  ಕಲ್ಮುರುಡೇಶ್ಚರ ಮಠದ ಬಳಿ ಬ್ಯಾನರ್ ವಿಚಾರವಾಗಿ 2 ಗುಂಪುಗಳ ಮಧ್ಯೆ ಗಲಾಟೆ ನಡೆದಿದ್ದು, ಎದುರಾಳಿ ಗುಂಪಿನ ಆರೋಪಿ ಸಂಜಯ್ ತಲೆಗೂ ಗಂಭೀರ ಗಾಯವಾಗಿದ್ದು, ಆತನನ್ನು ಚಿಕ್ಕಮಗಳೂರು ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ದತ್ತ ಜಯಂತಿ ಬ್ಯಾನರ್ ತೆರವು ವಿಚಾರವಾಗಿ ಗಲಾಟೆ ನಡೆದಿದ್ದು, ಹತ್ಯೆ ನಡೆಸಿದ ಗುಂಪಿನ ಆರೋಪಿಗಳು ಹಿಂದೂ ಪರ ಸಂಘಟನೆಗೆ ಸೇರಿದವರು ಎನ್ನಲಾಗಿದೆ.

ಸಖರಾಯಪಟ್ಟಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಸ್ಥಳಕ್ಕೆ ಚಿಕ್ಕಮಗಳೂರು ಎಸ್‌ಪಿ ವಿಕ್ರಮ್ ಆಮ್ಟೆ ಭೇಟಿ ನೀಡಿ ಪರಿಶೀಲಿಸಿದ್ದಾರೆ.   ಇಬ್ಬರು ಆರೋಪಿಗಳನ್ನು ಬಂಧಿಸಿ ತನಿಖೆ ಮುಂದುವರೆಸಿದ್ದಾರೆ.


ಕೆಲವು ದಿನಗಳಿಂದಲೇ ಎರಡು ಗುಂಪುಗಳ ನಡುವೆ ಉದ್ವಿಗ್ನತೆ ಇದ್ದಿದ್ದು  ಪೊಲೀಸರು ಸಮಯಕ್ಕೆ ಸರಿಯಾಗಿ ಕ್ರಮ ಕೈಗೊಂಡಿದ್ದರೆ ಹತ್ಯೆ ತಪ್ಪಿಸಬಹುದಿತ್ತು’ ಎಂದು ಕಡೂರು ಶಾಸಕ ಆನಂದ್ ಹೇಳಿಕೆ ನೀಡಿದ್ದಾರೆ. 

Continue Reading
Click to comment

Leave a Reply

Your email address will not be published. Required fields are marked *

Advertisement