Published
3 months agoon
By
Akkare News
ಪುತ್ತೂರು: ದ.ಕ.ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಕ್ಷೇತ್ರ ಶಿಕ್ಷಣಾಧಿಕಾರಿಯವರ ಕಛೇರಿ ಹಾಗೂ ಹಾರಾಡಿ ಮಾದರಿ ಉನ್ನತ ಹಿರಿಯ ಪ್ರಾಥಮಿಕ ಶಾಲೆಯ ಸಹಯೋಗದಲ್ಲಿ ಪುತ್ತೂರು ಮತ್ತು ಕಡಬ ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಕಲನ-2025 ಕಾರ್ಯಕ್ರಮ ಡಿ.13ರಿಂದ 15 ರವರೆಗೆ ಹಾರಾಡಿ ಶಾಲಾ ಸಭಾಂಗಣದಲ್ಲಿ ನಡೆಯಲಿದೆ. ಡಿ.13ರಂದು ಬೆಳಿಗ್ಗೆ 9.30ರಿಂದ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಅಶೋಕ್ ಕುಮಾರ್ ರೈ ಉದ್ಘಾಟಿಸಲಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.













