Published
2 months agoon
By
Akkare News

ಇತ್ತೀಚೆಗಷ್ಟೇ ಕಿಚ್ಚ ಸುದೀಪ್ ಅವರು ಹುಬ್ಬಳ್ಳಿಯಲ್ಲಿ “ನಾವು ಯುದ್ಧಕ್ಕೆ ಸಿದ್ಧ, ಮಾತಿಗೆ ಬದ್ಧ, ತಡೆಯೋಕೆ ಸಾಧ್ಯವಾಗುಷ್ಟು ತಡೆಯಿರಿ,” ಎಂಬ ಹೇಳಿಕೆಯನ್ನು ನೀಡಿದ್ದರು. ಇದು ಹಲವು ತಿರುವುಗಳನ್ನು ಪಡೆದುಕೊಂಡಿತ್ತು. ಇದೇ ವಿಚಾರವಾಗಿ ಸಾಮಾಜಿಕ ಜಾಲತಾಣದಲ್ಲಿ ದರ್ಶನ್ ಹಾಗೂ ಸುದೀಪ್ ಅಭಿಮಾನಿಗಳು ಸಮರವನ್ನೇ ನಡೆಸಿದ್ದರು. ಬಳಿಕ ಸ್ವತಃ ನಟ ಸುದೀಪ್ ಅವರೇ ಹೀಗೆ ಹೇಳಿದ್ದೇಕೆ ಎಂದು ತಿಳಿಸಿ ಗೊಂದಲಗಳಿಗೆ ತೆರೆ ಎಳೆದಿದ್ದರು. “ಪೈರೈಸಿ ವಿರುದ್ಧ ಯುದ್ಧ ಎಂದು ಹೇಳಿದ್ದನೆ. ಅದು ಬಿಟ್ಟು ಬೇರೆ ಯಾವುದೇ ಉದ್ದೇಶ ಇಲ್ಲ,” ಎಂದು ಹೇಳುವ ಮೂಲಕ ಸ್ಪಷ್ಟನೆ ನೀಡಿದ್ದರು.

ಇನ್ನೂ ಸಾಮಾಜಿಕ ಜಾಲಾತಾಣದಲ್ಲಿ ನಟ ಸುದೀಪ್ ಅವರನ್ನು ಟಾರ್ಗೆಟ್ ಮಾಡಿರುವ ದರ್ಶನ್ ಅಭಿಮಾನಿಗಳು, ಅವರ ಪುತ್ರಿ ಸಾನ್ವಿ ಬಗ್ಗೆಯೂ ಕೆಟ್ಟ ಕಮೆಂಟ್ಗಳನ್ನು ಮಾಡಿದ್ದಾರೆ. ಈಗಾಗಲೇ ಇದಕ್ಕೆ ಉತ್ತರಿಸಿದ್ದ ಸುದೀಪ್ ಖಡಕ್ ತಿರುಗೇಟು ಕೊಟ್ಟಿದ್ದರು. ಅವಳು ನನಗಿಂತ ಸ್ಟ್ರಾಂಗ್, 10 ಪಟ್ಟು ಬೆಳೆಯುತ್ತಾರೆ ಅವರು. ಅಲ್ಲದೆ, ನಾನು ಎದುರಿಸಿದ ಸಮಸ್ಯೆಗಳಿಗಿಂತ 10 ಪಟ್ಟು ಎದುರಿಸುವ ಸಾಮರ್ಥ್ಯ ಹೊಂದಿದ್ದಾರೆ. ಆದ್ದರಿಂದ ಟೀಕೆಗಳ ಬಗ್ಗೆ ಮಾತನಾಡಿ ಸಮಯ ವ್ಯರ್ಥ ಮಾಡಿಕೊಳ್ಳುವುದಿಲ್ಲ ಎಂದು ಹೇಳಿದ್ದರು.

ಮಗಳ ಬಗ್ಗೆ ಕಿಚ್ಚ ಸುದೀಪ್ ಹೇಳಿದ್ದೇನು?: ಬಳಿಕ, ಸುದೀಪ್ ಅವರ ಪುತ್ರಿ ಸಾನ್ವಿ ಸುದೀಪ್ ಕೂಡ ಸಾಮಾಜಿಕ ಜಾಲತಾಣದ ಮೂಲಕ ಅಸಮಾಧಾನ ಹೊರಹಾಕಿದ್ದರು. ಈ ಕುರಿತು ಮಾಧ್ಯಮದವರೊಂದಿಗೆ ಮಾತನಾಡಿದ ಸುದೀಪ್ ಅವರು, ಸಾನ್ವಿ ಸುದೀಪ್ ಹಂಚಿಕೊಂಡಿರುವ ಪೋಸ್ಟ್ ಬಗ್ಗೆ ಮಾತನಾಡುತ್ತಾ, “ನನ್ನ ಮಗಳು ಸರಿಯಾಗಿಯೇ ಹೇಳಿದ್ದಾಳೆ” ಎಂದು ಹೇಳುವ ಮೂಲಕ ಮಗಳ ಹೇಳಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.











