Published
4 weeks agoon
By
Akkare News
ಮಹಿಳೆಯೊಬ್ಬರಿಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೃತಪಟ್ಟಿದ್ದು, ಬೈಕ್ ಸವಾರ ಗಂಭೀರವಾಗಿ ಗಾಯಗೊಂಡಿರುವ ಘಟನೆ ವಿಟ್ಲ ಬಸ್‌ಸ್ಟ್ಯಾಂಡ್ ಸಮೀಪ ರವಿವಾರ ಬೆಳಿಗ್ಗೆ ನಡೆದಿದೆ.
ಮೃತ ಮಹಿಳೆಯನ್ನು ವಿಟ್ಲ ಮುಡ್ನೂರು ಗ್ರಾಮದ ಮರುವಾಳ ನಿವಾಸಿ ಸೀತಾ ಶೆಟ್ಟಿ (68) ಎಂದು ಗುರುತಿಸಲಾಗಿದೆ.



ಗಾಯಗೊಂಡು ಬಿದ್ದಿದ್ದ ಬೈಕ್ ಸವಾರನನ್ನು ಯಾರೂ ಮುಟ್ಟದೆ ಇದ್ದ ಸಂದರ್ಭ ಕಾಶಿಮಠ ನಿವಾಸಿ ಪ್ರತಾಪ್ ಅವರು ಮಾನವೀಯತೆ ಮೆರೆದಿದ್ದು, ತಮ್ಮ ದ್ವಿಚಕ್ರ ವಾಹನದಲ್ಲಿ ಗಾಯಾಳುವನ್ನು ಕೂಡಲೇ ಆಸ್ಪತ್ರೆಗೆ ಸೇರಿಸಿದ್ದಾರೆ.
ಮೃತ ಸೀತಾ ಶೆಟ್ಟಿ ಅವರು ಪುತ್ರ ರೂಪೇಶ್ ಹಾಗೂ ಪುತ್ರಿ ರೂಪಿತಾರನ್ನು ಅಗಲಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.






