Connect with us

ಸ್ಥಳೀಯ

ಉಚಿತ ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್, ಪಂಪ್ ಸೆಟ್ ರಿಪೇರಿಗೆ ತರಬೇತಿಗೆ ಅರ್ಜಿ ಆಹ್ವಾನ

Published

on

ದಕ್ಷಿಣ ಕನ್ನಡ: ಸ್ವ-ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಉಚಿತ ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್ ಹಾಗೂ ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿಯನ್ನು ರುಡ್ ಸೆಟ್ ಸಂಸ್ಥೆಯಿಂದ ಆಹ್ವಾನಿಸಲಾಗಿದೆ.

ದಕ್ಷಿಣ ಕನ್ನಡ ಜಿಲ್ಲೆಯ ಉಜಿರೆಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಸಂಪೂರ್ಣ ಉಚಿತ ತರಬೇತಿಗಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ
ದಿನಾಂಕ 05-03-2026ರಿಂದ 03-04-2026ರವರೆಗೆ ಎಲೆಕ್ಟ್ರಿಕ್ ಮೋಟಾರ್ ವೈಂಡಿಂಗ್ ಮತ್ತು ಪಂಪ್ ಸೆಟ್ ರಿಪೇರಿ ತರಬೇತಿಗೆ ಅರ್ಜಿಯನ್ನು ಕರೆಯಲಾಗಿದೆ.

30 ದಿನಗಳ ಉಚಿತ ತರಬೇತಿ ಇದಾಗಿದ್ದು, 18ರಿಂದ 50 ವರ್ಷದ ಒಳಗಿನವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ತರಬೇತಿಯ ವೇಳೆಯಲ್ಲಿ ಊಟ, ವಸತಿ ಉಚಿತವಾಗಿದೆ. ವಾಟ್ಸ್ ಆಪ್ ಮೂಲಕ ಅರ್ಜಿಯನ್ನು ಸಲ್ಲಿಸುವುದಾದರೇ 6364561982ಗೆ ರಿಸ್ಯೂಂ ಕಳುಹಿಸಬಹುದು.

ಆಧಾರ್ ಕಾರ್ಡ್, ರೇಷನ್ ಕಾರ್ಡ್, ಉದ್ಯೋಗ ಚೀಟಿ, ಪಾಸ್ ಪೋಟೋ ಸೇರಿದಂತೆ ಇತರೆ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸೋದು ಮರೆಯಬೇಡಿ. ಈ ಸಂಬಂಧ ಹೆಚ್ಚಿನ ಮಾಹಿತಿಗಾಗಿ 9902594791, 9591044014, 9980885900ಗೆ ಸಂಪರ್ಕಿಸಬಹುದಾಗಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement