Published
4 weeks agoon
By
Akkare News
ಉಡುಪಿ: ಹರಾಜಿನಲ್ಲಿ ಫ್ಲ್ಯಾಟ್ ಮತ್ತು ಚಿನ್ನದ ಖರೀದಿಸಿ ಕೊಡುವುದಾಗಿ ನಂಬಿಸಿ ಮುಂಬೈ ಮೂಲದ ಉದ್ಯಮಿ ಮಮತಾ ಶೆಟ್ಟಿಗೆ ಸುಮಾರು 4.78 ಕೋಟಿ ರೂ. ವಂಚನೆ ನಡೆಸಿರುವ ಆರೋಪ ಉಡುಪಿಯ ದಂಪತಿ ವಿರುದ್ಧ ಕೇಳಿಬಂದಿದೆ. ಈ ಸಂಬಂಧ ಸುಹಾಸಿನಿ ಶೆಟ್ಟಿ ಹಾಗೂ ಅವರ ಪತಿ ಪುನೀತ್ ಶೆಟ್ಟಿ ವಿರುದ್ಧ ಪ್ರಕರಣ ದಾಖಲಾಗಿದೆ.

ಎರಡು ವರ್ಷಗಳಲ್ಲಿ ಹಂತ ಹಂತವಾಗಿ ವಂಚನೆ.
ಮಮತಾ ಶೆಟ್ಟಿಗೆ ದೂರದ ಸಂಬಂಧಿಯಾಗಿರುವ ಸುಹಾಸಿನಿ, 2024ರ ಜನವರಿಯಿಂದ ಜೂನ್‌ವರೆಗೆ ಹಂತ ಹಂತವಾಗಿ 4.78 ಕೋಟಿ ರೂ. ಹಣ ವರ್ಗಾಯಿಸಿಕೊಳ್ಳಲಾಗಿದೆ ಎಂದು ದೂರಿನಲ್ಲಿ ಉಲ್ಲೇಖಿಸಲಾಗಿದೆ. ಹರಾಜಿನಲ್ಲಿ ಚಿನ್ನ, ಫ್ಲ್ಯಾಟ್ ಹಾಗೂ ಸ್ಕ್ರಾಪ್ ವ್ಯವಹಾರದಲ್ಲಿ ಲಾಭಕರ ಹೂಡಿಕೆ ಮಾಡಿಕೊಡುವುದಾಗಿ ಭರವಸೆ ನೀಡಿ ಹಣ ಪಡೆದುಕೊಂಡಿದ್ದರೂ, ನಂತರ ಯಾವುದೇ ಆಸ್ತಿಯನ್ನೂ ಖರೀದಿಸಿ ಕೊಡದೆ ವಂಚನೆ ಮಾಡಿರುವುದಾಗಿ ಆರೋಪಿಸಲಾಗಿದೆ.

ಈ ಬಗ್ಗೆ 2024ರಲ್ಲಿ ಉಡುಪಿ ಸೈಬರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಸುಹಾಸಿನಿ ಶೆಟ್ಟಿ ನ್ಯಾಯಾಲಯದಿಂದ ಪ್ರಕರಣಕ್ಕೆ ಸ್ಟೇ ಆದೇಶ ಪಡೆದಿದ್ದರು ಎನ್ನಲಾಗಿದೆ. ನಂತರ ಕಿಶೋರ್ ಶೆಟ್ಟಿ ಮತ್ತು ನವೀನ್ ಮೂಲ್ಕಿ ಎನ್ನುವವರ ಮೂಲಕ ಸಂಧಾನ ಮಾತುಕತೆ ನಡೆದಿದ್ದರೂ ಅದು ವಿಫಲವಾಗಿದೆ. ಇದೀಗ ಸುಹಾಸಿನಿ ಮತ್ತು ಪತಿ ಮಣಿಪಾಲದಿಂದ ಮಂಗಳೂರಿಗೆ ಸ್ಥಳಾಂತರಗೊಂಡ ಹಿನ್ನೆಲೆ, ಮಮತಾ ಶೆಟ್ಟಿ ಮಂಗಳೂರು ಪೊಲೀಸ್ ಆಯುಕ್ತರನ್ನು ಸಂಪರ್ಕಿಸಿ ಮರು ತನಿಖೆಗೆ ಮನವಿ ಮಾಡಿದ್ದಾರೆ. ಪ್ರಕರಣವನ್ನು ಮರು ಪರಿಶೀಲಿಸುವುದಾಗಿ ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಭರವಸೆ ನೀಡಿದ್ದಾರೆ.
ವಯನಾಡಿನಲ್ಲಿ ಇಬ್ಬರೂ ರಿಜಿಸ್ಟರ್ ಮ್ಯಾರೇಜ್
ಇಬ್ಬರು ಪ್ರೀತಿಸಿ, ರಿಜಿಸ್ಟರ್ ಮ್ಯಾರೇಜ್ ಆಗಿದ್ದಾರೆ. ಇಬ್ಬರೂ ಕೇರಳದ ವಯನಾಡಿನಲ್ಲಿರುವ ರಿಜಿಸ್ಟರ್ ಆಫೀಸ್‌ನಲ್ಲಿ ಕಳೆದ ಜನವರಿ 31ರಂದು ರಿಜಿಸ್ಟರ್ ಮದುವೆಯಾಗಿದ್ದಾರೆ. ಅತ್ತ ಮಗಳು ರಿಜಿಸ್ಟರ್ ಮದುವೆಯಾಗುತ್ತಿದ್ದಂತೆ, ಇತ್ತ ಅದರ ಬಗ್ಗೆ ಬಗ್ಗೆ ಗೊತ್ತಾಗಿ ಆಕೆ ವಾಸ್ತವ್ಯವಿದ್ದ ಪಿಜಿಗೆ ಬಂದು ಆಕೆ ಪೋಷಕರು ವಿಚಾರಿಸಿದ್ದಾರೆ.
ಪೊಲೀಸ್ ಠಾಣೆ ಮೆಟ್ಟಿಲೇರಿದ ಪೋಷಕರು
ಪಿಜಿ ಸಿಸಿ ಕ್ಯಾಮರಾ ಪರಿಶೀಲಿಸಿದಾಗ ಕೆಲವು ವಿಚಾರ ಬೆಳಕಿಗೆ ಬಂದಿದೆ. ಆಕೆ ಫೆಬ್ರವರಿ 9ರಂದು ಪಿಜಿಯಿಂದ ತೆರಳಿದ ವಿಡಿಯೋ ಸೆರೆಯಾಗಿದೆ. ಅದಾದ ಮೇಲೆ ಮಗಳು ಸಂಪರ್ಕಕ್ಕೆ ಸಿಗದೇ ಪೋಷಕರು ಕಂಗಾಲಾಗಿದ್ದಾರೆ. ಮಗಳು ಸಂಪರ್ಕಕ್ಕೆ ಸಿಗದೇ ಇರುದ್ದರಿಂದ ಸುರತ್ಕಲ್ ಠಾಣೆಯಲ್ಲಿ ಆಕೆಯ ಪೋಷಕರು ದೂರು ನೀಡಿದ್ದಾರೆ. ಇನ್ನು ಇದೊಂದು ಲವ್ ಜಿಹಾದ್ ಪ್ರಕರಣ ಅಂತ ಹಿಂದೂ ಪರ ಸಂಘಟನೆಗಳು ಆರೋಪಿಸಿವೆ.








