Published
3 weeks agoon
By
Akkare News
ಬಜತ್ತೂರು ಮುಕ್ವೆಯಲ್ಲಿ ಅಸಭ್ಯವಾಗಿ ವರ್ತಿಸಿ ಪೊಲೀಸರ ಕೈಗೆ ಸಿಕ್ಕಿಬಿದ್ದ ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಮಹಮ್ಮದ್ ಮೋಹಾದ್ ಎಸ್ (33 ವರ್ಷ) ಎಂಬ ವ್ಯಕ್ತಿ ಮಾದಕ ದ್ಯವ್ಯ ಸೇವನೆ ಮಾಡಿದವನೆಂದು ತಪಾಸಣೆಯಿಂದ ದೃಢಪಟ್ಟಿದ್ದು, ಆತನ ವಿರುದ್ಧ NDPS ಕಾಯ್ದೆಯಂತೆ ಪ್ರಕರಣ ದಾಖಲಾಗಿದೆ.

ದಿನಾಂಕ 17-02-2026 ರಂದು ಪುತ್ತೂರು ತಾಲೂಕು ಬಜತ್ತೂರು ಗ್ರಾಮದ ಕಾಂಚನ ಮುಕ್ವೆ ಎಂಬಲ್ಲಿ ಒಬ್ಬ ವ್ಯಕ್ತಿಯು ಸಿಗರೇಟ್ ಸೇದುತ್ತಾ ಅಸಭ್ಯವಾಗಿ ವರ್ತಿಸುತ್ತಿರುವುದಾಗಿ ಸಾರ್ವಜನಿಕರಿಂದ ಬಂದ ಮಾಹಿತಿಯಂತೆ ಸದ್ರಿ ವ್ಯಕ್ತಿಯನ್ನು ಉಪ್ಪಿನಂಗಡಿ ಪೊಲೀಸ್ ಠಾಣೆಯ ರೌಂಡ್ಸ್ ಕರ್ತವ್ಯದಲ್ಲಿದ್ದ ಪೊಲೀಸ್ ಉಪ ನಿರೀಕ್ಷಕರಾದ ಸುರೇಶ್ ಸಿ.ಟಿ ರವರು ಸಿಬ್ಬಂದಿಗಳೊಂದಿಗೆ ಸ್ಥಳಕ್ಕೆ ತೆರಳಿ ವಶಕ್ಕೆ ಪಡೆದಿದ್ದರು.
ವಿಚಾರಣೆ ವೇಳೆ ಬಂಟ್ವಾಳ ತಾಲೂಕು ವಿಟ್ಲ ಪಡ್ನೂರು ಗ್ರಾಮದ ಮಹಮ್ಮದ್ ಮೋಹಾದ್ ಎಸ್ (33 ವರ್ಷ) ಎಂಬಾತನು ತನ್ನ ಮನೆಗೆ ಹೋಗುವ ದಾರಿಯಲ್ಲಿ ಸಿಗರೇಟ್ ಸೇದಿರುವುದೆಂದು ತಿಳಿದು ಬಂದಿರುತ್ತದೆ. ನಂತರ ಸದ್ರಿ ವ್ಯಕ್ತಿಯನ್ನು ವೈದ್ಯಕೀಯ ತಪಾಸಣೆಗೆ ಒಳಪಡಿಸಿದಾಗ ಮಾದಕ ದ್ರವ್ಯ ಸೇವನೆ ಮಾಡಿರುವುದು ದೃಢಪಟ್ಟಿರುತ್ತದೆ. ಈ ಬಗ್ಗೆ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 24/2026 ರಂತೆ ಕಲಂ 27(b) NDPS Act (ನಂತೆ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ.








