Published
3 hours agoon
By
Akkare News
ಪಶ್ಚಿಮ ಏಷ್ಯಾದಲ್ಲಿ ಇರಾನ್ ಮತ್ತು ಇಸ್ರೇಲ್-ಅಮೆರಿಕಾ ನಡುವಿನ ಉದ್ವಿಗ್ನತೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ದೇಶದಲ್ಲಿ ಅಡುಗೆ ಅನಿಲದ (LPG) ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಭೀತಿ ಎದುರಾಗಿದೆ. ತೈಲ ಮಾರುಕಟ್ಟೆ ಕಂಪನಿಗಳು (OMCs) ಅನಿಲದ ಅಭಾವದ ಹಿನ್ನೆಲೆಯಲ್ಲಿ ಹೋಟೆಲ್ ಮತ್ತು ರೆಸ್ಟೋರೆಂಟ್ಗಳಿಗೆ ನೀಡುವ ವಾಣಿಜ್ಯ ಎಲ್ಪಿಜಿ ಸಿಲಿಂಡರ್ಗಳ ಪೂರೈಕೆಯನ್ನು ಸ್ಥಗಿತಗೊಳಿಸುವುದಾಗಿ ಘೋಷಿಸಿವೆ.

ಗ್ಯಾಸ್ ಪೂರೈಕೆ ಇಲ್ಲದ ಕಾರಣ ಮಾರ್ಚ್ 10, 2026 ಬೆಂಗಳೂರಿನ ಹೋಟೆಲ್ ಮತ್ತು ರೆಸ್ಟೋರೆಂಟ್ಗಳು ಕಾರ್ಯನಿರ್ವಹಿಸುವುದು ಕಷ್ಟವಾಗಲಿದ್ದು, ಬಂದ್ ಆಗುವ ಸಾಧ್ಯತೆಯಿದೆ . ಉದ್ವಿಗ್ನತೆಯ ಕಾರಣ ಸೌದಿ ಅರೇಬಿಯಾದಲ್ಲಿ ಕಚ್ಚಾ ತೈಲ ಬೆಲೆ ಏರಿಕೆಯಾಗಿದ್ದು, ಶನಿವಾರವಷ್ಟೇ ವಾಣಿಜ್ಯ ಸಿಲಿಂಡರ್ ಬೆಲೆಯಲ್ಲಿ 60 ರೂ. ಹೆಚ್ಚಳವಾಗಿದೆ ಎಂದು ವರದಿಯಾಗಿದೆ.
ಹೋಟೆಲ್ ಮಾಲೀಕರ ಆತಂಕ: ಮುಂದಿನ 70 ದಿನಗಳ ಕಾಲ ಗ್ಯಾಸ್ ಪೂರೈಕೆಯಲ್ಲಿ ಯಾವುದೇ ತೊಂದರೆಯಾಗುವುದಿಲ್ಲ ಎಂದು ಈ ಹಿಂದೆ ಕಂಪನಿಗಳು ಭರವಸೆ ನೀಡಿದ್ದವು. ಆದರೆ ಈಗ ದಿಢೀರ್ ಆಗಿ ಪೂರೈಕೆ ನಿಲ್ಲಿಸಿರುವುದು ಹೋಟೆಲ್ ಉದ್ಯಮಕ್ಕೆ ದೊಡ್ಡ ಹೊಡೆತ ನೀಡಿದೆ ಎಂದು ‘ಬೆಂಗಳೂರು ಹೋಟೆಲ್ ಮಾಲೀಕರ ಸಂಘ’ ಆತಂಕ ವ್ಯಕ್ತಪಡಿಸಿದೆ.

ಜನಸಾಮಾನ್ಯರ ಮೇಲೆ ಪರಿಣಾಮ
ಬೆಂಗಳೂರಿನಂತಹ ಮಹಾನಗರದಲ್ಲಿ ಹೋಟೆಲ್ಗಳು ಮುಚ್ಚಲ್ಪಟ್ಟರೆ, ಪ್ರತಿದಿನ ಹೋಟೆಲ್ ಆಹಾರವನ್ನೇ ಅವಲಂಬಿಸಿರುವ ಬ್ಯಾಚುಲರ್ಗಳು, ಐಟಿ ಉದ್ಯೋಗಿಗಳು ಮತ್ತು ವಿದ್ಯಾರ್ಥಿಗಳು ತೀವ್ರ ಸಂಕಷ್ಟಕ್ಕೆ ಸಿಲುಕಲಿದ್ದಾರೆ. ಈ ಬಿಕ್ಕಟ್ಟನ್ನು ನಿವಾರಿಸಲು ಕೇಂದ್ರ ಸರ್ಕಾರವು ಅಲ್ಜೇರಿಯಾ, ಆಸ್ಟ್ರೇಲಿಯಾ, ಕೆನಡಾ, ನಾರ್ವೆ ಮತ್ತು ಯುಎಇ ಮುಂತಾದ ರಾಷ್ಟ್ರಗಳಿಂದ ಎಲ್ಪಿಜಿ ಖರೀದಿಸಲು ಮಾತುಕತೆ ನಡೆಸುತ್ತಿದೆ ಎಂದು ತಿಳಿದುಬಂದಿದೆ.






