Published
3 weeks agoon
By
Akkare News
ರಾಜ್ಯದಲ್ಲಿ ಹಲವು ದಿನಗಳಿಂದ ಮಳೆಯಾರ್ಭಟ ಮುಂದುವರಿದಿದ್ದು, ಇಂದು ಕೂಡ ಗುಡುಗು ಸಹಿತ ಮಳೆಯಾಗಲಿದೆ.ಬೀದರ್, ಕಲಬುರ್ಗಿ, ಯಾದಗಿರಿ, ವಿಜಯಪುರ, ದಕ್ಷಿಣ ಕನ್ನಡ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಆದ್ದರಿಂದ ಈ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಸೂಚಿಸಲಾಗಿದೆ.

ಈ ಮಧ್ಯೆಯೂ ರಾಜ್ಯದಲ್ಲಿ ಬಿಸಿಲಿನ ವಾತಾವರಣವೂ ಇದೆ. ಹೀಗಾಗಿ ವೃದ್ಧರು, ಮಕ್ಕಳು, ಗರ್ಭಿಣಿ ಹಾಗೂ ಬಾಣಂತಿಯರು ಬಿಸಿಲಿನಲ್ಲಿ ಓಡಾಟ ತಪ್ಪಿಸಿ.







