Connect with us

ಇತರ

HSRP ನಂಬರ್ ಪ್ಲೇಟ್ ಕಡ್ಡಾಯವಲ್ಲ ಎಂಬುದು ಸುಳ್ಳು ಸುದ್ದಿ: ಸಾರಿಗೆ ಇಲಾಖೆ ಸ್ಪಷ್ಟನೆ

Published

on

ಬೆಂಗಳೂರು ಎಪ್ರಿಲ್ 04: ರಾಜ್ಯದಲ್ಲಿ 2019ರ ಏಪ್ರಿಲ್ 1ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ಹಳೆಯ ವಾಹನಗಳಿಗೆ ಹೈ ಸೆಕ್ಯುರಿಟಿ ನೋಂದಣಿ ಪ್ಲೇಟ್ (HSRP) ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ ಎಂದು ರಾಜ್ಯ ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

ಕಳೆದ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣಗಳಲ್ಲಿ “ಹಳೆಯ ವಾಹನಗಳಿಗೆ ಹೆಚ್ಎಸ್ಆರ್​ಪಿ ಕಡ್ಡಾಯವಲ್ಲ” ಎಂಬ ತಪ್ಪು ಮಾಹಿತಿ ಹರಡುತ್ತಿತ್ತು. ಈ ಹಿನ್ನೆಲೆಯಲ್ಲಿ ಇಲಾಖೆಯು ಮಾಧ್ಯಮ ಪ್ರಕಟಣೆ ಹೊರಡಿಸಿ, ಸುಳ್ಳು ಸುದ್ದಿಗಳಿಗೆ ಕಿವಿಗೊಡದಂತೆ ವಾಹನ ಮಾಲೀಕರಿಗೆ ಮನವಿ ಮಾಡಿದೆ. 1989ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ ಈ ನಿಯಮ ಜಾರಿಯಲ್ಲಿದ್ದು, ಇದನ್ನು ರಾಜ್ಯ ಸರ್ಕಾರ 2023ರ ಅಧಿಸೂಚನೆಯಲ್ಲಿ ಎತ್ತಿಹಿಡಿದಿದೆ. ನ್ಯಾಯಾಲಯವು ಕೂಡ ಸರ್ಕಾರದ ನಿರ್ಧಾರದಂತೆ ಕ್ರಮ ಕೈಗೊಳ್ಳಲು ಹಸಿರು ನಿಶಾನೆ ತೋರಿಸಿರುವುದರಿಂದ, ಈ ನಿಯಮದಲ್ಲಿ ಯಾವುದೇ ವಿನಾಯಿತಿ ಇರುವುದಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸಾರಿಗೆ ಇಲಾಖೆಯ ಪ್ರಕಾರ 01 ಏಪ್ರಿಲ್​ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸುವುದು ಕಡ್ಡಾಯವಾಗಿದ್ದು, ಈ ನಿಯಮದಲ್ಲಿ ಯಾವುದೇ ಬದಲಾವಣೆ ಆಗಿಲ್ಲ ಎಂದು ತಿಳಿಸಿದೆ. ರಾಜ್ಯದ ಎಲ್ಲಾ ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ತಕ್ಷಣವೇ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳುವಂತೆ ಇಲಾಖೆ ಮನವಿ ಮಾಡಿದೆ.

ಕೇಂದ್ರ ಸರ್ಕಾರವು 1989ರ ಕೇಂದ್ರ ಮೋಟಾರು ವಾಹನ ನಿಯಮಗಳ 50ನೇ ವಿಧಿಯ ಅನ್ವಯ, 01 ಏಪ್ರಿಲ್​ 2019ಕ್ಕಿಂತ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​​ಪಿ ಅಳವಡಿಕೆ ಕಡ್ಡಾಯ ಮಾಡಿದೆ. ಈ ನಿಯಮವು 2018ರಲ್ಲಿ ಜಾರಿಗೊಂಡಿದ್ದು, ರಾಜ್ಯದಲ್ಲಿಯೂ ಈ ನಿಯಮ ಅನ್ವಯವಾಗುತ್ತಿದೆ. ರಾಜ್ಯ ಸಾರಿಗೆ ಇಲಾಖೆ 2023ರಲ್ಲಿ ಹೊರಡಿಸಿದ ಅಧಿಸೂಚನೆ ಪ್ರಕಾರ, 2019ರ ಏಪ್ರಿಲ್ 1ರ ಮೊದಲು ನೋಂದಾಯಿತವಾಗಿರುವ ಎಲ್ಲಾ ವಾಹನಗಳಿಗೆ ಹೆಚ್ಎಸ್ಆರ್​ಪಿ ನಂಬರ್ ಪ್ಲೇಟ್ ಅಳವಡಿಸಿಕೊಳ್ಳಬೇಕು ಎಂದು ಸೂಚಿಸಲಾಗಿತ್ತು.


ಈ ವಿಷಯಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾಗಿದ್ದ ಅರ್ಜಿಯ ವಿಚಾರಣೆ ವೇಳೆ, ನ್ಯಾಯಾಲಯವು ಸರ್ಕಾರಕ್ಕೆ ಕ್ರಮ ಕೈಗೊಳ್ಳಲು ಅವಕಾಶ ನೀಡಿದ್ದು, ಹೆಚ್ಎಸ್ಆರ್​ಪಿ ಅಳವಡಿಕೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದ ನಿರ್ಧಾರವನ್ನು ಅನುಸರಿಸುವಂತೆ ಸೂಚಿಸಿತ್ತು. ಇದೇ ಸಂದರ್ಭದಲ್ಲಿ, ವಾಹನ ಮಾಲೀಕರು ತಮ್ಮ ಹಳೆಯ ವಾಹನಗಳಿಗೆ ಹೆಚ್ಎಸ್ಆರ್​ಪಿ ಅಳವಡಿಸಿಕೊಳ್ಳುವುದು ಕಡ್ಡಾಯವಾಗಿದ್ದು, ಇದರಲ್ಲಿ ಯಾವುದೇ ವಿನಾಯಿತಿ ಇಲ್ಲ ಎಂದು ಸಾರಿಗೆ ಇಲಾಖೆ ಸ್ಪಷ್ಟಪಡಿಸಿದೆ.

Continue Reading
Click to comment

Leave a Reply

Your email address will not be published. Required fields are marked *

Advertisement