Connect with us

ಧಾರ್ಮಿಕ

ಪುತ್ತೂರು: ನಾಳೆಯಿಂದ (ಎ.10)ಹತ್ತೂರ ಒಡೆಯ ಪುತ್ತೂರು ಮಹಾಲಿಂಗೇಶ್ವರ ದೇವರ ಜಾತ್ರೋತ್ಸವ

Published

on

ಪುತ್ತೂರು:ಇತಿಹಾಸ ಪ್ರಸಿದ್ಧ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವರ ವಾರ್ಷಿಕ ಜಾತ್ರೆ ಏ.10ಕ್ಕೆ ಆರಂಭಗೊಳ್ಳಲಿದೆ. ಪ್ರತಿ ದಿನ ಶ್ರೀ ದೇವರ ಉತ್ಸವ ಬಲಿ, ಪೇಟೆ ಸವಾರಿಯೊಂದಿಗೆ ಕಟ್ಟೆ ಪೂಜೆ ಸ್ವೀಕಾರ ನಡೆಯಲಿದೆ.

ಪ್ರತಿದಿನ ಸಂಜೆ ದೇವಳದ ನಟರಾಜ ವೇದಿಕೆಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು, ದೇವಳದ ರಾಜಗೋಪುರದಲ್ಲಿ ನಿರಂತರ ಭಜನಾ ಕಾರ್ಯಕ್ರಮ, ಅನ್ನದ ಅಗುಳು ಮುತ್ತಾದ ಕೆರೆಯ ಬಳಿಯೇ ಅನ್ನಪ್ರಸಾದ ವಿತರಣೆ ನಡೆಯಲಿದೆ. ಶಾಸಕ ಅಶೋಕ್ ಕುಮಾರ್ ರೈ ಅವರ ಮಾರ್ಗದರ್ಶನದಂತೆ ಉತ್ಸವಾದಿಗಳು ಸಮಯಕ್ಕೆ ಸರಿಯಾಗಿ ನಡೆಯಲಿದೆ ಎಂದು ದೇವಳದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಈಶ್ವರ ಭಟ್ ಪಂಜಿಗುಡ್ಡೆ ತಿಳಿಸಿದ್ದಾರೆ.

Continue Reading
Click to comment

Leave a Reply

Your email address will not be published. Required fields are marked *

Advertisement