Connect with us

ಸ್ಥಳೀಯ

ಮೂಡಬಿದಿರೆ ಕಾಲೇಜಿನ ಪಿಯುಸಿ ವಿದ್ಯಾರ್ಥಿನಿ ದಿಶಾ 600 ಕ್ಕೆ 600 ಅಂಕ ತೆಗೆದು ಇಡೀ ರಾಜ್ಯದಲ್ಲಿ ಪ್ರಥಮ

Published

on

ಮೂಡುಬಿದಿರೆ: ರಾಜ್ಯಾದ್ಯಂತ ಕುತೂಹಲ ಮೂಡಿಸಿದ್ದ 2026ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಇಂದು ಹೊರಬಿದ್ದಿದ್ದು, ಮೂಡುಬಿದಿರೆಯ ಆಳ್ವಾಸ್ ಪಿಯು ಕಾಲೇಜು ರಾಜ್ಯಮಟ್ಟದಲ್ಲಿ ಅಭೂತಪೂರ್ವ ಯಶಸ್ಸು ಸಾಧಿಸಿದೆ.

ವಾಣಿಜ್ಯ ವಿಭಾಗದಲ್ಲಿ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿನಿ ದಿಶಾ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆಯುವ ಮೂಲಕ ಶೈಕ್ಷಣಿಕ ಕ್ಷೇತ್ರದಲ್ಲಿ ಹೊಸ ದಾಖಲೆ ಬರೆದಿದ್ದಾರೆ.

ನೂರಕ್ಕೆ ನೂರು: ದಿಶಾ ಅಪ್ರತಿಮ ಸಾಧನೆ
ಮೂಡುಬಿದಿರೆ ಮೂಲದವರೇ ಆದ ದಿಶಾ, ವಾಣಿಜ್ಯ ವಿಭಾಗದ ಆರೂ ವಿಷಯಗಳಲ್ಲಿ ತಲಾ 100 ಅಂಕಗಳನ್ನು ಪಡೆಯುವ ಮೂಲಕ ಒಟ್ಟು 600ಕ್ಕೆ 600 ಅಂಕಗಳನ್ನು ಬಾಚಿಕೊಂಡಿದ್ದಾರೆ. ಇವರ ಈ ಸಾಧನೆಯು ಇಡೀ ರಾಜ್ಯದ ಗಮನ ಸೆಳೆದಿದೆ.

ಫಲಿತಾಂಶ ಪ್ರಕಟವಾಗುತ್ತಿದ್ದಂತೆಯೇ ಆಳ್ವಾಸ್ ಶಿಕ್ಷಣ ಸಂಸ್ಥೆಯಲ್ಲಿ ಸಂಭ್ರಮ ಮನೆಮಾಡಿದೆ. ವಿದ್ಯಾರ್ಥಿನಿಯ ಸಾಧನೆಯನ್ನು ಕಂಡು ಹರ್ಷ ವ್ಯಕ್ತಪಡಿಸಿದ ಆಳ್ವಾಸ್ ಶಿಕ್ಷಣ ಪ್ರತಿಷ್ಠಾನದ ಅಧ್ಯಕ್ಷರಾದ ಡಾ. ಎಂ. ಮೋಹನ್ ಆಳ್ವ ದಿಶಾ ಅವರಿಗೆ ಅಭಿನಂದಿಸಿದರು.

ತನ್ನ ಪ್ರೀತಿಯ ತಾಯಿ ನಿಧನವಾದರೂ,ಕಣ್ಣೀರು ಹಾಕಿಕೊಂಡೇ ಪರೀಕ್ಷೆ ಬರೆದ ದೀಕ್ಷಾ ಎಂಬ ಸಹೋದರಿ ಅಮ್ಮನ ಆಶೀರ್ವಾದದಿಂದ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿರುತ್ತಾರೆ

Continue Reading
Click to comment

Leave a Reply

Your email address will not be published. Required fields are marked *

Advertisement