Published
2 weeks agoon
By
Akkare News
ಪುತ್ತೂರು: ಇತಿಹಾಸ ಪ್ರಸಿದ್ಧ ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಎ.10ರಿಂದ ಆರಂಭಗೊಳ್ಳುವ ವರ್ಷಾವಧಿ ಜಾತ್ರೋತ್ಸವು ದೇವಳದಲ್ಲಿ ಧ್ವಜಾರೋಹಣ ನೆರವೇರಿಸುವ ಮೂಲಕ ಚಾಲನೆ ದೊರೆಯಿತು.
ಬೆಳಗ್ಗೆ 9.20ರ ನಂತರದ ವೃಷಭ ಲಗ್ನದಲ್ಲಿ ಸುಮಾರು 10.38ರ ಸಮಯಕ್ಕೆ ದೇವಾಲಯದ ತಂತ್ರಿ ಬ್ರಹ್ಮಶ್ರೀ ಕುಂಟಾರು ರವೀಶ್ ತಂತ್ರಿಯವರ ನೇತೃತ್ವದಲ್ಲಿ ಧ್ವಜಾರೋಹಣ ನಡೆಯಿತು. ಈ ಸಂದರ್ಭದಲ್ಲಿ ಶಾಸಕರಾದ ಅಶೋಕ್ ಕುಮಾರ್ ರೈ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷ ಈಶ್ವರ್ ಭಟ್ ಪಂಜಿಗುಡ್ಡೆ ಸಹಿತ ಸದಸ್ಯರು, ಅಪಾರ ಭಕ್ತರು ಪಾಲ್ಗೊಂಡರು.







