ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಇಂದು ಚೇತನಾ ಆಸ್ಪತ್ರೆಯಲ್ಲಿ ಉಚಿತ ಫೈಬ್ರೋ ಸ್ಕ್ಯಾನ್ ಲಿವರ್ ಫಂಕ್ಷನ್ ಟೆಸ್ಟ್ ತಪಾಸಣೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತರ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಜೀವನಶೈಲಿ ತಂತ್ರಜ್ಞಾನ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ *ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಯಶಸ್ವಿ ಕಾರ್ಯಕ್ರಮ 250 ಕ್ಕೂ ಮಿಕ್ಕಿ ಸ್ವನ ಗಳಿಗೆ ಲಸಿಕೆಅಭಿವೃದ್ಧಿ ಕಾರ್ಯಗಳು ಆರೋಗ್ಯ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ವಾಣಿಜ್ಯ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಫೆ.22 ರಂದು ಕೋಡಿಂಬಾಡಿ ಗ್ರಾಮ ಪಂಚಾಯತು ವ್ಯಾಪ್ತಿಯಲ್ಲಿ ಸಾಕು ನಾಯಿಗಳಿಗೆ ರೇಬಿಸ್ ರೋಗ ನಿರೋಧಕ ಉಚಿತ ಲಸಿಕಾ ಕಾರ್ಯಕ್ರಮಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಜೀವನಶೈಲಿ ತಂತ್ರಜ್ಞಾನ ಪ್ರಕಟಣೆ ಮಂಗಳೂರು ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ಶುಭಾರಂಭ ಸಂಘ-ಸಂಸ್ಥೆಗಳು ಸಭೆ - ಸಮಾರಂಭ ಸಾಮಾನ್ಯ ಸ್ಥಳೀಯ
ಆತ್ರೇಯ ಮಲ್ಟಿಸ್ಲೆಷಲಿಟಿ ಕ್ಲಿನಿಕ್ ಪುತ್ತೂರುವತಿಯಿಂದ : ಉಚಿತ ಗುದಾಗತ ರೋಗಗಳ ತಪಾಸಣಾ ಶಿಬಿರ (ಪೈಲ್ಸ್, ಫಿಷರ್, ಫಿಸ್ತುಲ)ಅಭಿನಂದನೆ ಅಭಿವೃದ್ಧಿ ಕಾರ್ಯಗಳು ಆರೋಗ್ಯ ಇಂದಿನ ಕಾರ್ಯಕ್ರಮ ಇತ್ತೀಚಿನ ಸುದ್ದಿಗಳು ಇಲಾಖಾ ಮಾಹಿತಿ ಊರಿನ ಸುದ್ದಿಗಳು ಕರ್ನಾಟಕ ಕಾರ್ಯಕ್ರಮಗಳು ಚರ್ಚೆಗಳು ಚಿಣ್ಣರ ಲೋಕ ಮಾಹಿತಿ ಮುಂದಿನ ಕಾರ್ಯಕ್ರಮ ಯೋಜನೆಗಳು ರಾಜಕೀಯ ಶಾಲಾ ಚಟುವಟಿಕೆ ಸಭೆ - ಸಮಾರಂಭ ಸ್ಥಳೀಯ
ಪುತ್ತೂರು: ತೆಂಕಿಲದಲ್ಲಿ ನೂತನವಾಗಿ ನಿರ್ಮಾಣವಾದ ಅಂಗನವಾಡಿ ಕೇಂದ್ರ ಪುತ್ತೂರು ಶಾಸಕ ಅಶೋಕ್ ರೈಯವರಿಂದ ಉದ್ಘಾಟನೆPublished
1 year agoon
By
Akkare Newsಬೆಂಗಳೂರು: ರಾಜ್ಯದಲ್ಲಿ ಕೊರೋನಾ ರೂಪಾಂತರಿ ತಳಿ ಕಂಡುಬಂದಿರುವ ಹಿನ್ನೆಲೆಯಲ್ಲಿ 60 ವರ್ಷದ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯಗೊಳಿಸಲಾಗಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಕುಶಾಲ್ ನಗರದಲ್ಲಿ ಇಂದು ಮಾಧ್ಯಮದವರಿಗೆ ಪ್ರತಿಕ್ರಿಯಿಸಿದ ಅವರು, ಕೋವಿಡ್ ವಿಚಾರವಾಗಿ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ತಿಳಿಸಿದರು.
ಕೊರೋನಾ ರೂಪಾಂತರಿ ಬಗ್ಗೆ ಯಾರೂ ಆತಂಕಪಡಬೇಕಿಲ್ಲ. ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವ ನಿಟ್ಟಿನಲ್ಲಿ ಈಗಾಗಲೇ ನಾನು ಒಂದು ಸುತ್ತಿನ ಸಭೆಯನ್ನು ಆರೋಗ್ಯ ಇಲಾಖೆ ಅಧಿಕಾರಿಗಳ ಜೊತೆ ನಡೆಸಿದ್ದೇನೆ. ಅಲ್ಲದೇ ಡಾ. ರವಿ ಅವರ ನೇತೃತ್ವದ ತಾಂತ್ರಿಕ ಸಲಹಾ ಸಮಿತಿ ಕೂಡಾ ನಿನ್ನಯೇ ಸಭೆ ನಡೆಸಿ ಕೆಲವು ಸಲಹೆಗಳನ್ನ ನೀಡಿದ್ದಾರೆ.
60 ವರ್ಷ ಮೇಲ್ಪಟ್ಟವರು ಹಾಗೂ ಹೃದಯ ಸಂಬಂಧಿ ಕಾಯಿಲೆ ಹೊಂದಿದವರು, ಉಸಿರಾಟದ ಸಮಸ್ಯೆ ಇರುವವರಿಗೆ ಮಾಸ್ಕ್ ಕಡ್ಡಾಯಗೊಳಿಸುವಂತೆ ಸಮಿತಿಯವರು ಸಲಹೆ ನೀಡಿದ್ದಾರೆ. ಸಮಿತಿಯ ಸಲಹೆಗಳನ್ನ ಆಧರಿಸಿ ಆರೋಗ್ಯ ಇಲಾಖೆಯಿಂದ ಇಂದು ಮಾರ್ಗಸೂಚಿ ಹೊರಡಿಸಲಾಗುವುದು ಎಂದು ಸಚಿವ ದಿನೇಶ್ ಗುಂಡೂರಾವ್ ಹೇಳಿದರು.
ಹೆಚ್ಚು ಟೆಸ್ಟಿಂಗ್ ಮಾಡುವಂತೆ ಆರೋಗ್ಯ ಇಲಾಖೆಗೆ ಅಧಿಕಾರಿಗಳಿಗೆ ಸೂಚಿಸಲಾಗಿದ್ದು, ಅಗತ್ಯವಿರುವ ಬೆಡ್. ಪಿಪಿಇ ಕಿಟ್, ಸನ್ನದ್ಧ ಸ್ಥಿತಿಯಲ್ಲಿ ಇರಿಸಿಕೊಳ್ಳಲು ಎಲ್ಲ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ತಿಳಿಸಲಾಗಿದೆ. ಕೇರಳ ಗಡಿ ಜಿಲ್ಲೆಗಳಲ್ಲಿ ಹೆಚ್ಚು ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ ಎಂದರು. ಶೀತ, ಜ್ವರ ಕೆಮ್ಮು ಇರುವವರು ಕೊರೊನಾ ಪರೀಕ್ಷೆ ಮಾಡಿಸಿಕೊಳ್ಳಬೇಕು. ಹೆಚ್ಚು ಪಾಸಿಟಿವ್ ಬಂದರೆ ಮಾತ್ರ ಸಾರ್ವಜನಿಕ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಕ್ರಮಗಳನ್ನ ಕೈಗೊಳ್ಳುವುದು ಅನಿವಾರ್ಯವಾಗಲಿದೆ. ಸದ್ಯಕ್ಕೆ ಅಂತಹ ಪರಿಸ್ಥಿತಿ ಇಲ್ಲ ಯಾರೂ ಆತಂಕಪಡುವ ಅಗತ್ಯವಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು.