Published
2 months agoon
By
Akkare News
ಕಾಣಿಯೂರು: ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರದ ಅಂಬ್ಯುಲೆನ್ಸ್ ಚಾಲಕರಾಗಿ ಸೇವೆ ಸಲ್ಲಿಸುತ್ತಿದ್ದ, ಕಾಣಿಯೂರು ಕಟ್ಟತ್ತಾರು ನಿವಾಸಿ ಮಾಧವ ಗೌಡ (50) ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಕಳೆದ ಒಂದು ವರ್ಷದ ಹಿಂದೆಯಷ್ಟೇ ಸುಬ್ರಹ್ಮಣ್ಯ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ವರ್ಗಾವಣೆಗೊಂಡು ಬಂದಿದ್ದ ಇವರು, ಕರ್ತವ್ಯದ ಅವಧಿಯಲ್ಲಿ ಜನಾನುರಾಗಿಯಾಗಿದ್ದರು. ಇಂದು ಅವರಿಗೆ ದಿಢೀರ್ ಹೃದಯಾಘಾತ ಸಂಭವಿಸಿದ್ದು, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
‘



