Published
3 hours agoon
By
Akkare News
ಬೆಂಗಳೂರು ಸಹಕಾರ ಹಾಲು ಒಕ್ಕೂಟ (ಬಮೂಲ್) ಕಚೇರಿಯಲ್ಲಿ ಸುರೇಶ್ ಅವರು ಬುಧವಾರ ಮಾಧ್ಯಮಗಳನ್ನು ಉದ್ದೇಶಿಸಿ ಮಾತನಾಡಿದರು. ಇದಕ್ಕೂ ಮೊದಲು ತಿರುಪತಿಗೆ ತುಪ್ಪ ಪೂರೈಕೆ ವಾಹನಕ್ಕೆ ಬಮುಲ್ ನಿರ್ದೇಶಕರು, ಅಧಿಕಾರಿಗಳ ಜತೆಗೆ ಹಸಿರು ಬಾವುಟ ತೋರಿ ಬೀಳ್ಕೊಟ್ಟರು. 
‘ ಸಾಗಾಣಿಕೆಗೆ ಡಿಜಿಟಲ್ ಲಾಕ್ ತಂತ್ರಜ್ಞಾನ “ಸಾಗಾಣಿಕೆಗೆ ಡಿಜಿಟಲ್ ಲಾಕ್ ತಂತ್ರಜ್ಞಾನ ಬಳಸಿಕೊಳ್ಳಲಾಗಿದೆ. ನಾವು ಕೊಟ್ಟ ಪಾಸ್ ವರ್ಡ್ ಅಲ್ಲಿ ನಮೂದಿಸಿದರೆ ಮಾತ್ರ ತೆರೆಯಬಹುದು. ಗ್ರಾಹಕರಿಗೂ ಸಹ ಇದೆ ರೀತಿ ಗುಣಮಟ್ಟದ ಪದಾರ್ಥ ನೀಡುತ್ತಿದ್ದೇವೆ” ಎಂದರು. “ಶ್ರೀ ವೆಂಕಟೇಶ್ವರ ಸ್ವಾಮಿ , ಪದ್ಮಾವತಿ ಅಮ್ಮನವರ ಆಶೀರ್ವಾದ ನಮ್ಮ ನಂದಿನಿಯ ಮೇಲೆ ಇರುವ ಕಾರಣಕ್ಕೆ ಇದು ಸಾಧ್ಯವಾಗಿದೆ. ನಂದಿನಿ ಹೆಸರನ್ನು ದುರ್ಬಳಕೆ ಮಾಡಿಕೊಂಡು ಮಾರುಕಟ್ಟೆಯಲ್ಲಿ ಅಕ್ರಮ ಎಸಗುತ್ತಿರುವವರ ವಿರುದ್ದ ಈಗಾಗಲೇ ಕ್ರಮ ತೆಗೆದುಕೊಳ್ಳಲಾಗಿದೆ. ಈಗಾಗಲೇ ಅಂತಹವರ ವಿರುದ್ದ ಒಕ್ಕೂಟದಿಂದ ದೂರುಗಳನ್ನು ನೀಡಲಾಗಿದೆ” ಎಂದರು.



