Published
7 hours agoon
By
Akkare News
ಲಂಚದ ಬೇಡಿಕೆಯಿಂದ ಬೇಸತ್ತ ಮಹಾದೇವ್ ಅವರು ಬೀದರ್ ಲೋಕಾಯುಕ್ತ ಪೊಲೀಸರಿಗೆ ದೂರು ನೀಡಿದ್ದರು. ಅದರ ಆಧಾರದಲ್ಲಿ ಕಾರ್ಯಾಚರಣೆ ನಡೆಸಿದ ತಂಡ, ಗ್ರಾಮದ ಹೊರವಲಯದ ಧಾಬಾ ಒಂದರಲ್ಲಿ ಮುಂಗಡವಾಗಿ 2.5 ಲಕ್ಷ ರೂ. ಲಂಚ ಪಡೆಯುತ್ತಿದ್ದ ವೇಳೆ ದಾಳಿ ನಡೆಸಿ ಆರೋಪಿಗಳನ್ನು ರೆಡ್ಹ್ಯಾಂಡ್ ಆಗಿ ಬಂಧಿಸಿದೆ.
ಲೋಕಾಯುಕ್ತ ಡಿಎಸ್ಪಿ ಹಣಮಂತರಾಯ್ ಅವರ ನೇತೃತ್ವದಲ್ಲಿ ನಡೆದ ಈ ಕಾರ್ಯಾಚರಣೆಯಲ್ಲಿ ಪಿಐ ಅರ್ಜುನಪ್ಪ ಸೇರಿದಂತೆ ಸಿಬ್ಬಂದಿ ಪಾಲ್ಗೊಂಡಿದ್ದರು. ದಾಳಿಯ ವೇಳೆ ಲಂಚದ ಹಣ ವಶಪಡಿಸಿಕೊಂಡು ಇಬ್ಬರನ್ನೂ ಬಂಧಿಸಲಾಗಿದೆ ಎಂದು ತಿಳಿದು ಬಂದಿದೆ.



