ಪುತ್ತೂರಿನ ಜನಪ್ರಿಯ ಶಾಸಕ ಅಶೋಕ್ ರೈ ನೇತೃತ್ವದಲ್ಲಿ ಹತ್ತೂರ ಒಡೆಯ ಮಹಾಲಿಂಗೇಶ್ವರನ ಸನ್ನಿಧಿಯಲ್ಲಿ ಮೃತ್ಯುಂಜಯ ಪೂಜೆಯನ್ನು ಮೇ12ರಂದು ಆಯೋಜಿಸಲಾಗಿದೆ. ಇತ್ತೀಚೆಗೆ ಪುತ್ತೂರಿನಲ್ಲಿ ವಿಪರೀತ ಮಟ್ಟದಲ್ಲಿ ರಸ್ತೆ ಅಪಘಾತಗಳು ನಡೆದು ಜೀವ ಹಾನಿಯಾಗುತ್ತಿದೆ, ಹಲವಾರು ಮಂದಿ ಗಂಭೀರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದಾರೆ. ಈ ಹಿನ್ನೆಲೆಯಲ್ಲಿ ಜನರ ಹಿತದೃಷ್ಟಿಯಿಂದ ಮೃತ್ಯುಂಜಯ ಸೂಕ್ತ ಜಪ 1008 ಸಂಖ್ಯೆಯಿಂದ ಅನೇಕ ವೈದಿಕರಿಂದ ನಡೆಯಲಿದೆ. ಬೆಳಗ್ಗೆ 9:30 ರಿಂದ 11:30 ರ ತನಕ ಪೂಜೆ ನಡೆಯಲಿದೆ.ಮುಂದಿನ ದಿನಗಳಲ್ಲಿ ಯಾವುದೇ ಅಪಘಾತಗಳು ನಡೆಯದಿರಲಿ ಎಂದು ದೇವರ ಮೊರೆ ಹೋಗಲಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.